ಹುಬ್ಬಳ್ಳಿ:ಅನಿಲ ಸೋರಿಕೆಯಿಂದಾಗಿ ಅಗ್ನಿ ಅವಘಡ ಸಂಭವಿಸಿದ್ದು, 4 ಜನ ಭಕ್ತಾದಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ವೀರಾಪೂರ ಓಣಿಯ ಗಣಪತಿ ಈಶ್ಚರ ದೇವಸ್ಥಾನದಲ್ಲಿ ಘಟನೆ ನಡೆದಿದೆ.
ದೇವಸ್ಥಾನದ ಅಡುಗೆ ಕೋಣೆಯಲ್ಲಿ ಅನಿಲ ಸೋರಿಕೆಯಿಂದ ಬೆಂಕಿ ಅವಘಡ: ನಾಲ್ವರಿಗೆ ಗಾಯ - ETV Bharath Karnataka
ದೇವಸ್ಥಾನದಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ - ನಾಲ್ವರಿಗೆ ಗಾಯ - ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ.

ಗಣಪತಿ ಈಶ್ಚರ ದೇವಸ್ಥಾನ
ದೇವಸ್ಥಾನದ ಅಡುಗೆ ಮನೆಯಲ್ಲಿ ಆಕಸ್ಮಿಕವಾಗಿ ಈ ಅವಘಡ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ನಡೆದ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ತನ್ನ ತಾಯಿಯ ಸಾವಿನಿಂದ ಮನನೊಂದು ಮಗ ಆತ್ಮಹತ್ಯೆ!