ಹುಬ್ಬಳ್ಳಿ(ಧಾರವಾಡ):ಸಭೆ ಸಮಾರಂಭಗಳಲ್ಲಿ ಬಳಸುವ ಸ್ಪಾರ್ಕರ್ ಸಾಮಗ್ರಿಗಳನ್ನು ತಯಾರಿಸುವ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ನಾಲ್ವರು ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿಯ ಹೊರವಲಯದಲ್ಲಿರುವ ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದ ಮೊದಲ ಕ್ರಾಸ್ನಲ್ಲಿ ಅವಘಡ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಆ್ಯಂಬುಲೆನ್ಸ್ ಆಗಮಿಸಿದ್ದು, ರಕ್ಷಣೆಗೆ ಮುಂದಾಗಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ, ಘಟನೆಗೆ ನಿಖರ ಕಾರಣಗಳ ಮಾಹಿತಿ ನಿರೀಕ್ಷಿಸಲಾಗುತ್ತಿದೆ.