ಹುಬ್ಬಳ್ಳಿ: ತಾಂತ್ರಿಕ ದೋಷದಿಂದ ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ಉಣಕಲ್ ಕೆರೆ ಹತ್ತಿರದ ಪ್ರೆಸಿಡೆಂಟ್ ಹೋಟೆಲ್ ಎದುರು ನಿನ್ನೆ ತಡರಾತ್ರಿ ನಡೆದಿದೆ.
Video: ಏಕಾಏಕಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು - ಪ್ರೆಸಿಡೆಂಟ್ ಹೋಟೆಲ್
ಹುಬ್ಬಳ್ಳಿಯ ಉಣಕಲ್ ಕೆರೆ ಹತ್ತಿರದ ಪ್ರೆಸಿಡೆಂಟ್ ಹೋಟೆಲ್ ಎದುರು ಕಾರೊಂದು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ.
ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು
ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಕಾಲ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಾಚಿದ್ದು, ಹೋಟೆಲ್ನಲ್ಲಿರುವರು ಈ ಬೆಂಕಿಯ ನರ್ತನ ನೋಡಿ ಬೆಚ್ಚಿ ಬಿದ್ದರು.
ಇನ್ನು ಕಾರಿನ ಮಾಲೀಕರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಜೊತೆಗೆ ಕಾರು ಹೊತ್ತಿ ಉರಿಯಲು ಕಾರಣವೇನು? ಎಂಬುದು ತಿಳಿದು ಬರಬೇಕಿದೆ. ಈ ಘಟನೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Last Updated : Sep 17, 2021, 10:54 AM IST