ಹುಬ್ಬಳ್ಳಿ:ಶಾರ್ಟ್ ಸರ್ಕ್ಯೂಟ್ನಿಂದ ಎರಡು ಮನೆಗಳು ಬೆಂಕಿಗೆ ಆಹುತಿಯಾದ ಘಟನೆ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ 2 ಮನೆ : ಬೀದಿಗೆ ಬಂದ ಕುಟುಂಬಗಳು - Hubli fire incident news
ಶಾರ್ಟ್ ಸರ್ಕ್ಯೂಟ್ನಿಂದ ಎರಡು ಮನೆಗಳು ಬೆಂಕಿಗೆ ಆಹುತಿಯಾಗಿದ್ದು, ಕುಟುಂಬಗಳು ಬೀದಿಗೆ ಬಂದಿವೆ. ಈ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಮನೆ
ಗ್ರಾಮದ ಶಿವಬಸಪ್ಪ ವಾಲಿ ಮತ್ತು ಕಲ್ಲಪ್ಪ ವಾಲಿ ಎಂಬುವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ತಡರಾತ್ರಿ ಮನೆಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಸದಸ್ಯರು ಮಲಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಘಟನೆ ಸಂಭವಿಸಿದ ಕೂಡಲೇ ಗ್ರಾಮಸ್ಥರು ಮನೆಯಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ. ನಂತರ ಬೆಂಕಿ ನಂದಿಸುವಷ್ಟರಲ್ಲಿಯೇ ಮನೆಗಳಿಗೆ ಬೆಂಕಿ ಆವರಿಸಿಕೊಂಡು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.