ಹುಬ್ಬಳ್ಳಿ :ವಿದ್ಯುತ್ ತಂತಿ ತಗುಲಿ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ಕಲಘಟಗಿ ತಾಲೂಕಿನ ಮಲಕನಕೊಪ್ಪ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಭರಮಪ್ಪ ಕುರಿಯವರ ಎಂಬುವರಿಗೆ ಸೇರಿದ ಕಬ್ಬಿನ ಹೊಲದಲ್ಲಿ ಈ ಅವಘಡ ಸಂಭವಿಸಿದೆ.
ಕಬ್ಬಿನ ಹೊಲದಲ್ಲಿ ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್ಫಾರ್ಮರ್ ಇದ್ದಿದ್ದರಿಂದ ಶಾರ್ಟ್ ಸರ್ಕ್ಯೂಟ್ ಆಗಿ 2 ಎಕರೆಯಲ್ಲಿ ಬೆಳೆದ ಕಬ್ಬು ಸಂಪೂರ್ಣ ಬೆಂಕಿ ಆವರಿಸಿ ಸುಟ್ಟು ಅಪಾರ ನಷ್ಟ ಸಂಭವಿಸಿದೆ. ಈ ಅವಘಡಕ್ಕೆ ಹೆಸ್ಕಾಂ ನಿರ್ಲಕ್ಷ ಕಾರಣ ಎಂದು ಆರೋಪಿಸಲಾಗಿದ್ದು, ಸಂಬಂಧಪಟ್ಟ ಹೆಸ್ಕಾಂ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.