ಹುಬ್ಬಳ್ಳಿ :ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸಮರ ಸಾರಿದ ಕಿಮ್ಸ್ ಆಸ್ಪತ್ರೆಯು ರಾಜ್ಯದಲ್ಲಿಯೇ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಗೊಳಿಸಿದೆ. ಪ್ಲಾಸ್ಮಾ ಥೆರಪಿ ಚಿಕಿತ್ಸೆಯಿಂದ ಗುಣಮುಖರಾದ ವ್ಯಕ್ತಿಗೆ ಸಚಿವ ಜಗದೀಶ್ ಶೆಟ್ಟರ್ ಪುಷ್ಪ ಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.
ರಾಜ್ಯದಲ್ಲಿ ಮೊದಲ ಪ್ಲಾಸ್ಮಾ ಥೆರಪಿ ಯಶಸ್ವಿ.. ಗುಣಮುಖರಾದ ವ್ಯಕ್ತಿಗೆ ಸಚಿವ ಶೆಟ್ಟರ್ ಅಭಿನಂದನೆ - latest plasma therapy news
ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಪ್ಲಾಸ್ಮಾ ಥೆರಪಿಯಿಂದ ಯಶಸ್ವಿಯಾಗಿ ಗುಣಮುಖರಾದ ರಾಜ್ಯದ ಮೊದಲ ಕೊರೊನಾ ಸೋಂಕಿತ ವ್ಯಕ್ತಿಗೆ ಸಚಿವರು ಶುಭ ಕೋರಿದರು.
ರಾಜ್ಯದಲ್ಲಿ ಮೊದಲ ಪ್ಲಾಸ್ಮಾ ಥೆರಪಿ ಯಶಸ್ವಿ
ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪಡೆದಿದ್ದ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಪ್ಲಾಸ್ಮಾ ಥೆರಪಿಯಿಂದ ಯಶಸ್ವಿಯಾಗಿ ಗುಣಮುಖರಾದ ರಾಜ್ಯದ ಮೊದಲ ಕೊರೊನಾ ಸೋಂಕಿತ ವ್ಯಕ್ತಿಗೆ ಸಚಿವರು ಶುಭ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಶುಭಕೋರಿ ಆ್ಯಂಬುಲೆನ್ಸ್ ಮೂಲಕ ಮನೆಗೆ ಕಳುಹಿಸಿದರು.