ಹುಬ್ಬಳ್ಳಿ:ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ ಇಲ್ಲಿನ ಜೆಸಿ ನಗರದ ಲಾಡ್ಜ್ವೊಂದರ ಮೇಲೆ ಶಹರ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ ಮಾಲೀಕ, ಮ್ಯಾನೇಜರ್ ಸೇರಿ ಐವರನ್ನು ಬಂಧನ ಮಾಡಿದ್ದಾರೆ.
ಹುಬ್ಬಳ್ಳಿ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ: ಐವರ ಬಂಧನ, ಮೂವರು ಯುವತಿಯರ ರಕ್ಷಣೆ
ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಣೆ ಮಾಡಿದ್ದು, ಐವರನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ: ಐವರ ಬಂಧನ, ಮೂವರು ಯುವತಿಯರ ರಕ್ಷಣೆ
ನಗರದ ಕಂಫರ್ಟ್ ಜಯಲಕ್ಷ್ಮೀ ಲಾಡ್ಜ್ನಲ್ಲಿ ಗ್ರಾಹಕರಿಂದ ಹಣ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಶಹರ ಠಾಣೆ ಇನ್ಸ್ಪೆಕ್ಟರ್ ಆನಂದ ಒನಕುದ್ರೆ ನೇತೃತ್ವದ ತಂಡ ದಾಳಿ ನಡೆಸಿ ಮಾಲೀಕ, ಮ್ಯಾನೇಜರ್, ಆಟೋ ಚಾಲಕ ಹಾಗೂ ಇತರ ಇಬ್ಬರನ್ನು ಬಂಧಿಸಿದೆ. ಅಲ್ಲದೇ ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸಿರುಗುಪ್ಪ ಬಳಿ ಕಾರು ಅಪಘಾತ: ವಿವಾಹ ನಿಶ್ಚಯವಾಗಿದ್ದ ಯುವಕ - ಯುವತಿ ಸಾವು