ಹುಬ್ಬಳ್ಳಿ :ಅವಳಿ ನಗರದ ಜನರ ಬಹುದಿನಗಳ ಕನಸು ನನಸಾಗುವ ದಿನ ಹತ್ತಿರವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.
ಇಂಡಿಗೋ ಏರ್ ಲೈನ್ಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಹುಬ್ಬಳ್ಳಿಯಿಂದ ದೆಹಲಿಗೆ ನಿತ್ಯ ನೇರ ವಿಮಾನ ಸೇವೆ ಪ್ರಾರಂಭಿಸುವಂತೆ ಕೆಲವು ದಿನಗಳ ಹಿಂದೆ ಕೋರಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅವರು ಇದೇ ನವೆಂಬರ್ 14, 2022ರಿಂದ ನಿತ್ಯ ಈ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಟಿಕೆಟ್ ಬುಕ್ಕಿಂಗ್ ಕೂಡ ಈಗಾಗಲೇ ಪ್ರಾರಂಭವಾಗಿದೆ.