ಧಾರವಾಡ :ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿ ಹಾಗೂ ಪ್ರವಾಹ ಹಾನಿಯ ಅಧ್ಯಯನಕ್ಕೆ ಸೆ.8ರಂದು ಕೇಂದ್ರ ಸರ್ಕಾರದ ಅಂತರ್ ಸಚಿವಾಲಯ ತಂಡವು ಆಗಮಿಸಲಿದೆ.
ಅತಿವೃಷ್ಟಿ ಹಾನಿ ಅಧ್ಯಯನಕ್ಕೆ ಸೆ.8 ರಂದು ಕೇಂದ್ರ ಅಂತರ್ ಸಚಿವಾಲಯ ತಂಡ - Dharwad news
ಅಂದು ಬೆಳಗ್ಗೆ 9.30ರಿಂದ ಸಂಜೆ 6ಗಂಟೆಯವರೆಗೆ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಈ ತಂಡ ಪ್ರವಾಹ ಹಾನಿಯ ಅಧ್ಯಯನ ಪ್ರವಾಸ ಮಾಡಲಿದೆ..
ಮಳೆ
ಕೇಂದ್ರ ಕೃಷಿ ಹಾಗೂ ರೈತರ ಸಹಕಾರ ಮಾರುಕಟ್ಟೆ ಮಂತ್ರಾಲಯದ ಎಣ್ಣೆಬೀಜ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ.ಮನೋಹರನ್ ಹಾಗೂ ಕೇಂದ್ರ ಜಲಶಕ್ತಿ ಮಂತ್ರಾಲಯದ ಅಧೀಕ್ಷಕ ಇಂಜಿನಿಯರ್ ಗುರುಪ್ರಸಾದ್ ಜೆ ಅವರನ್ನೊಳಗೊಂಡ 2ನೇ ತಂಡವು ಸೆ.8ರಂದು ಬೆಳಗ್ಗೆ 8.55ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.
ಬೆಳಗ್ಗೆ 9.30ರಿಂದ ಸಂಜೆ 6ಗಂಟೆಯವರೆಗೆ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಈ ತಂಡ ಪ್ರವಾಹ ಹಾನಿಯ ಅಧ್ಯಯನ ಪ್ರವಾಸ ಮಾಡಲಿದೆ. ಅಂದು ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿ ಸೆ.9ರಂದು ಬೆಳಗ್ಗೆ ಬೆಂಗಳೂರಿಗೆ ತೆರಳಲಿದೆ.