ಹುಬ್ಬಳ್ಳಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿದ್ಯಾಲಯ ಹಾಗೂ ಮಂಜುನಾಥೇಶ್ವರ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಹಳೇ ಹುಬ್ಬಳ್ಳಿಯ ಜೈನ ಮಂದಿರದಲ್ಲಿ ಧಾರವಾಡ ಜಿಲ್ಲಾ ನೆರೆ ಸಂತ್ರಸ್ತರಿಗೆ ಬಟ್ಟೆ ಹಾಗೂ ಪಾತ್ರೆಗಳನ್ನು ವಿತರಿಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಧಾರವಾಡ ನೆರೆ ಸಂತ್ರಸ್ತರಿಗೆ ನೆರವು - ಧಾರವಾಡ ನೆರೆ ಸಂತ್ರಸ್ತರು
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿದ್ಯಾಲಯ ಹಾಗೂ ಮಂಜುನಾಥೇಶ್ವರ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಹಳೇ ಹುಬ್ಬಳ್ಳಿಯ ಜೈನ ಮಂದಿರದಲ್ಲಿ ಧಾರವಾಡ ಜಿಲ್ಲಾ ನೆರೆ ಸಂತ್ರಸ್ತರಿಗೆ ಬಟ್ಟೆ ಹಾಗೂ ಪಾತ್ರೆಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿ ಸಂತೋಷ ಆರ್ ಶೆಟ್ಟಿ, ಆಗಷ್ಟ್ ಮೊದಲ ವಾರದಲ್ಲಿ ಸುರಿದ ಬಾರಿ ಮಳೆಯಿಂದಾಗಿ ಮನುಕುಲಕ್ಕೆ ತುಂಬಾ ತೊಂದರೆ ಉಂಟಾಗಿದೆ. ನೂರಾರು ಕುಟುಂಬಗಳು ಬೀದಿಗೆ ಬಂದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ನಿರಾಶ್ರಿತರಿಗೆ ಸಹಾಯ ಮಾಡುವ ಸದುದ್ದೇಶದಿಂದ ಆಯೋಜಿಸಲಾಗಿರುವ ಕಾರ್ಯಕ್ರಮ ಶ್ಲಾಘನೀಯವಾಗಿದೆ. ಉತ್ತರ ಕರ್ನಾಟಕದಲ್ಲಿ ಇಂತಹ ಪರಿಸ್ಥಿತಿ ಎದುರಾಗಿದ್ದರೂ ಕೂಡ ಉತ್ತರ ಕರ್ನಾಟಕದ ಜನತೆಯೂ ನಿರಾಶ್ರಿತರ ಜೀವನವನ್ನು ಸುಧಾರಿಸಲು ಕೈ ಜೋಡಿಸಿರುವುದು ವಿಶೇಷವಾಗಿದೆ ಎಂದರು. ಅಲ್ಲದೇ ನಿರಾಶ್ರಿತರಿಗೆ ಸರ್ಕಾರ ಆದಷ್ಟು ಬೇಗ ಪರಿಹಾರ ದೊರಕಿಸಿ ಜೀವನಕ್ಕೆ ಸೂಕ್ತ ದಾರಿ ಮಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ್ರ, ಧಾರವಾಡ ಜಿಲ್ಲಾ ನಿರ್ದೇಶಕ ಸುರೇಶ ಎಂ. ಪತ್ರಕರ್ತರ ಸಂಘದ ಅಧ್ಯಕ್ಷರಾದ ಗಣಪತಿ ಗಂಗೊಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.