ಧಾರವಾಡ: ಮಾಂಡೌಸ್ ಚಂಡಮಾರುತದ ಪರಿಣಾಮ ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಹೂವು ಬೆಳೆಗಾರರು ಸಂಕಷ್ಟ ಎದುರಿಸುವಂತಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವಲ್ಲ ಎಂದು ಕಣ್ಣೀರಿಡುತ್ತಿದ್ದಾರೆ.
ಧಾರವಾಡ ತಾಲೂಕಿನ ಗೋವನಕೊಪ್ಪ, ಕುರುಬಗಟ್ಟಿ ಸೇರಿದಂತೆ ವಿವಿಧ ಗ್ರಾಮಗಳ ರೈತರು ಹೂವಿನ ಕೃಷಿ ಮಾಡಿದ್ದಾರೆ. ಸೇವಂತಿಗೆ, ಗುಲಾಬಿ ಸೇರಿದಂತೆ ಸುಗಂಧಿ ಹೂವುಗಳನ್ನು ಬೆಳೆದಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆಯಾಗುತ್ತಿರುವುದರಿಂದ ಹೂವಿನ ಬೆಳೆ ಮೇಲೆ ಭಾರಿ ದುಷ್ಪರಿಣಾಮ ಬೀರಿದೆ.