ಕರ್ನಾಟಕ

karnataka

ETV Bharat / state

ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರ ಕುಟುಂಬಕ್ಕೆ ಆಹಾರ ಕಿಟ್​ ವಿತರಿಸಿದ ಸುನೀಲ್​ ಪುರಾಣಿಕ್​ - Career Courses

ಚಲನಚಿತ್ರರಂಗದಲ್ಲಿ ನಟನೆ, ನಿರ್ಮಾಣ, ಸಂಕಲನ ಸೇರಿದಂತೆ ಇನ್ನಿತರ ಕ್ಷೇತ್ರಗಳ ಕುರಿತು ಪೂರ್ಣವಾದ ಅಧ್ಯಯನ ಕೋರ್ಸ್​​ಗಳನ್ನು ಆರಂಭಿಸುವ ಕುರಿತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತಿಳಿಸಿದ್ದಾರೆ. ಅಲ್ಲದೆ ಅಕಾಡೆಮಿಯ ಚಟುವಟಿಕೆಗಳನ್ನು ರಾಜ್ಯದ ವಿವಿಧ ಭಾಗಗಳಿಗೆ ವಿಸ್ತರಿಸುವ ಯೋಜನೆ ಇದೆ ಎಂದಿದ್ದಾರೆ.

Food kit distributed for artists family those who facing trouble from covid
ಕೊರೊನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರ ಕುಟುಂಬಕ್ಕೆ ಆಹಾರ ಕಿಟ್​ ವಿತರಣೆ

By

Published : Jul 3, 2020, 7:41 PM IST

ಧಾರವಾಡ: ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಚಲನಚಿತ್ರ ಅಕಾಡೆಮಿಯ ಕ್ಷೇಮಾಭಿವೃದ್ಧಿ ನಿಧಿ ಮೂಲಕ ಸಂಕಷ್ಟದಲ್ಲಿದ್ದ ಸುಮಾರು 600 ಕಲಾವಿದರಿಗೆ ನೆರವು ನೀಡಲಾಗಿತ್ತು.

ಅದರಂತೆ ಬೆಂಗಳೂರಿನಿಂದ ಹೊರಗಡೆ ಇರುವ ಧಾರವಾಡ, ಬೆಳಗಾವಿ ಜಿಲ್ಲೆಗಳು ಸೇರಿದಂತೆ ವಿವಿಧ ಭಾಗಗಳ ಕಲಾವಿದರಿಗೆ ಆಹಾರ ನಾಗರಿಕ ಇಲಾಖೆಯ ನೆರವು ಮತ್ತು ಸ್ಥಳೀಯ ಸಂಪನ್ಮೂಲ ಸಂಗ್ರಹಿಸಿ ದಿನಸಿ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಹೇಳಿದರು.

ಕೊರೊನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರ ಕುಟುಂಬಕ್ಕೆ ಆಹಾರದ ಕಿಟ್​ ವಿತರಣೆ

ಕನ್ನಡ ಚಲನಚಿತ್ರ ರಂಗದ ಆಸಕ್ತರಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಚಲನಚಿತ್ರ ನಟನೆ, ಸಂಕಲನ, ನಿರ್ಮಾಣ ಮತ್ತಿತರ ವಿಷಯಗಳ ಕುರಿತ ಅಧ್ಯಯನ ಪೂರ್ಣವಾದ ತರಬೇತಿಗಾಗಿ ಅಕಾಡೆಮಿಕ್​​​ ಕೋರ್ಸುಗಳು, ಕಾರ್ಯಾಗಾರಗಳನ್ನು ರೂಪಿಸಲಾಗುತ್ತಿದೆ. ಈ ಕಾರ್ಯಕ್ಕೆ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದರು.

ನಗರದ ಓಸ್ವಾಲ್ ಟವರ್​​​ನ ಹೋಟೆಲ್ ಮಾಲೀಕರ ಸಂಘದ ಸಭಾಂಗಣದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಹಯೋಗದಲ್ಲಿ ಏರ್ಪಡಿಸಿದ್ದ ಚಲನಚಿತ್ರ ಕಲಾವಿದರಿಗೆ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಆಹಾರಧಾನ್ಯ ಕಿಟ್ ವಿತರಿಸಿ ಅವರು ಮಾತನಾಡಿದರು.

ಚಲನಚಿತ್ರ ಅಕಾಡೆಮಿಯ ಚಟುವಟಿಕೆಗಳನ್ನು ರಾಜ್ಯದ ಎಲ್ಲಾ ಭಾಗಗಳಿಗೆ ವಿಸ್ತರಿಸಲಾಗುವುದು. ಉತ್ತರ ಕರ್ನಾಟಕವು ಸಂಸ್ಕೃತಿ, ಪರಂಪರೆ, ವೈವಿಧ್ಯಮಯ ಕಲಾ ಪ್ರಕಾರಗಳಲ್ಲಿ ಶ್ರೀಮಂತವಾಗಿದೆ. ಕೊರೊನಾ ಲಾಕ್​​​ಡೌನ್ ಕಾರಣದಿಂದ ಚಲನಚಿತ್ರ ರಂಗವೂ ಸೇರಿದಂತೆ ಹಲವು ರಂಗಗಳು ತೀವ್ರ ಸಂಕಷ್ಟದಲ್ಲಿವೆ.

ಈ ಸಂದರ್ಭದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನಾಮಕರಣಗೊಂಡಿರುವ ಶ್ರೀನಿವಾಸ ಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು.

ABOUT THE AUTHOR

...view details