ಹುಬ್ಬಳ್ಳಿ :ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಚುರುಕಾಗಿ ನಡೆದಿದೆ. ಬೆಳ್ಳಂಬೆಳಗ್ಗೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಅಕ್ರಮ ಅಂಗಡಿಗಳನ್ನು ತೆರವುಗೊಳಿಸಿದರು.
ಹಲವು ವರ್ಷಗಳಿಂದ ಫುಟ್‌ಪಾತ್ ಹಾಗೂ ಪಾರ್ಕಿಂಗ್ ಜಾಗವನ್ನು ಅತಿಕ್ರಮಣಗೊಳಿಸಿದ ಹಿನ್ನೆಲೆ ಪಾದಾಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗಿತ್ತು. ಈ ಕಾರಣಕ್ಕೆ ಜಿಲ್ಲಾಧಿಕಾರಿ ಆದೇಶ ಮೇರೆಗೆ ಹು-ಧಾ ಮಹಾನಗರ ಪಾಲಿಕೆ ಅಧಿಕಾರಿಗಳು ಅತಿಕ್ರಮಣ ಅಂಗಡಿಗಳನ್ನು ತೆರವುಗೊಳಿಸಿದರು.