ಧಾರವಾಡ: ನಿರ್ಮಾಣ ಹಂತದ ಕಟ್ಟಡ ಕುಸಿದ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟ್ಟಡ ದುರಂತದಲ್ಲಿ ಸದ್ಯಕ್ಕೆ 9 ಜನ ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿದವರು ಸುರಕ್ಷಿತವಾಗಿ ಹೊರಬರಲಿ ಅಂತಾ ಪ್ರಾರ್ಥಿಸುವುದಾಗಿ ಹೇಳಿದರು.
ಇನ್ನು ಈ ದುರಂತಕ್ಕೆ ಕಾರಣರಾದ ಕಟ್ಟಡ ಮಾಲೀಕರು ಹಾಗೂ ಎಂಜಿನೀಯರ್ಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಶೆಟ್ಟರ್ ಆಗ್ರಹಿಸಿದರು.
ನಿರ್ಮಾಣ ಹಂತದ ಕಟ್ಟಡ ಕುಸಿದ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ. ಇದರ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಮೃತರ ಕುಟುಂಬದವರಿಗೆ 10 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಗಾಯಾಳುಗಳಿಗೆ 2 ರಿಂದ 5 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಪರವಾನಗಿ ಇಲ್ಲದೇ ಹೆಚ್ಚುವರಿ ಅಂತಸ್ತು ಕಟ್ಟಡ ಕಟ್ಟಿ ಕಳಪೆ ಕಾಮಗಾರಿ ಮಾಡಲು ಸಹಕರಿಸಿದ ಪಾಲಿಕೆ ಸಿಬ್ಬಂದಿ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.