ಕರ್ನಾಟಕ

karnataka

ETV Bharat / state

ಸಿಎಂ ಅವರಿಂದ ದೂರ ಉಳಿದ ಮಾಜಿ ಸಿಎಂ: ಬೊಮ್ಮಾಯಿ, ಶೆಟ್ಟರ್ ನಡುವೆ ಡಿಸ್ಟೆನ್ಸ್ ಮೆಂಟೇನ್​​​​​​..! - ಬಸವರಾಜ ಬೊಮ್ಮಾಯಿ ಅವರಿಂದ ದೂರ ಉಳಿದ ಜಗದೀಶ ಶೆಟ್ಟರ್

ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಸೋಮವಾರ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರೂ, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್ ಕಾರ್ಯಕ್ರಮಗಳಿಂದ ದೂರ ಉಳಿದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಸಿಎಂ ಅವರಿಂದ ದೂರ ಉಳಿದ ಮಾಜಿ ಸಿಎಂ
ಸಿಎಂ ಅವರಿಂದ ದೂರ ಉಳಿದ ಮಾಜಿ ಸಿಎಂ

By

Published : Sep 28, 2021, 6:56 PM IST

ಹುಬ್ಬಳ್ಳಿ :ನರದಲ್ಲಿ ಕಳೆದ ಎರಡು ದಿನಗಳಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರು ‌ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವಾರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರೂ ಈ ಭಾಗದ ನಾಯಕರು ಮಾತ್ರ ಯಾಕೋ‌ ದುರವೇ ಉಳಿದುಕೊಂಡಿದ್ದಾರೆ.

ಹೌದು.. ಸಿಎಂ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಸೋಮವಾರ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಆದರೆ, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕ ಜಗದೀಶ ಶೆಟ್ಟರ್ ಕಾರ್ಯಕ್ರಮಗಳಿಂದ ದೂರ ಉಳಿದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಬಾಣತಿಕಟ್ಟೆಯಲ್ಲಿ ನಡೆದ ವಿವಿಧ ಠಾಣೆಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದ ಆಹ್ವಾನಿತರಲ್ಲಿ ಶಾಸಕ ಜಗದೀಶ ಶೆಟ್ಟರ್ ಹೆಸರಿತ್ತು. ಆದರೂ, ಅವರು ಧಾರವಾಡದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಧಾರವಾಡಕ್ಕೆ ತೆರಳಿದ್ದರು.

ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿದ್ದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು, ನಂತರ ಸಭೆಗೆ ತೆರಳಿದ್ದರು. ಸ್ವಾಭಿಮಾನ ಬಿಟ್ಟು ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಸಚಿವನಾಗುವುದಿಲ್ಲ' ಎಂದು ಹೇಳಿದ್ದ ಶೆಟ್ಟರ್ ಈಗ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳದೇ ಇರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ABOUT THE AUTHOR

...view details