ಹುಬ್ಬಳ್ಳಿ : ನಾವೇನು ದೊಡ್ಡ ಸಮಾವೇಶ ಮಾಡಿ ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಈ ಭಾಗದಲ್ಲಿ ಅಭಿವೃದ್ಧಿ ಕೆಲಸಗಳಾಗಿವೆ. ಹೀಗಾಗಿ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ನಗರದ ಕೇಶ್ವಾಪುರಲ್ಲಿರುವ ರಸ್ತೆ ಉದ್ಘಾಟನೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳ ಬಳಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಿದ್ಯಾರ್ಥಿಗಳನ್ನ ಬಳಕೆ ಮಾಡಿಕೊಂಡಿರೋದನ್ನ ಅನ್ಯತಾ ಭಾವಿಸೋದು ಬೇಡ ಎಂದರು. ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಕೇವಲ ಹುಳ ಬಿಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ಬಿಟ್ಟು ಕಾಂಗ್ರೆಸ್ಗೆ ಹೋಗೋದಕ್ಕೆ ಸದ್ಯ ಯಾರೂ ತಯಾರಿಲ್ಲ. ಸಿಎಂ ಆಗಬೇಕು ಅಂತಾ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರತಿದಿನ ಹೊಡೆದಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಸಿಎಂ ಆಗೋ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.