ಕರ್ನಾಟಕ

karnataka

ETV Bharat / state

ಪಾಪು ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಹೆಚ್.ಕೆ. ಪಾಟೀಲ್‌

ಅನಾರೋಗ್ಯದಿಂದ ಬಳಲುತ್ತಿರುವ ನಾಡೋಜ ಪಾಟೀಲ್​ ಪುಟ್ಟಪ್ಪ ಅವರನ್ನು ಮಾಜಿ ಸಚಿವ ಹೆಚ್.ಕೆ. ಪಾಟೀಲ್‌ ಸೇರಿದಂತೆ ಕಾಂಗ್ರೆಸ್​ ಮುಖಂಡರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

HK Patil
ಹೆಚ್.ಕೆ ಪಾಟೀಲ್‌

By

Published : Feb 24, 2020, 4:38 PM IST

ಹುಬ್ಬಳ್ಳಿ: ಹಿರಿಯ ಪತ್ರಕರ್ತ, ನಾಡೋಜ ಪಾಟೀಲ ಪುಟ್ಟಪ್ಪ(ಪಾಪು) ಅವರಿಗೆ ಹಲವು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್‌ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪಾಪು ಅವರ ಆರೋಗ್ಯ ವಿಚಾರಿಸಿದರು.

ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಹೆಚ್.ಕೆ. ಪಾಟೀಲ್‌

ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿರುವ ಪಾಟೀಲ್​ ಪುಟ್ಟಪ್ಪ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಅವರಿಗೆ ಕೆಮ್ಮು, ಕಫಾ ಹಾಗೂ ಶಾಸ್ವಕೋಶದ ಸಮಸ್ಯೆ ಕಾಡುತ್ತಿದೆ.

ಮಾಜಿ ಸಚಿವ ಹೆಚ್.ಕೆ. ಪಾಟೀಲ್​ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿ, ವೈದ್ಯರಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಆಸ್ಪತ್ರೆಗೆ ಇಂದು ಶಾಸಕ ಪ್ರಸಾದ್​ ಅಬ್ಬಯ್ಯ ಅವರು ಕೂಡ ಭೇಟಿ ನೀಡಿ ಪಾಪು ಅವರ ಯೋಗಕ್ಷೇಮ ವಿಚಾರಿಸಿದರು.

ABOUT THE AUTHOR

...view details