ಕರ್ನಾಟಕ

karnataka

ETV Bharat / state

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಎಸ್.ಆರ್.ಮೋರೆ ನಿಧನ - ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್. ಆರ್‌. ಮೋರೆ‌

ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್.ಆರ್‌.ಮೋರೆ‌ ಅನಾರೋಗ್ಯದಿಂದ ನಿಧನರಾಗಿದ್ದಾರೆ.

Former minister S R Morey is no more
ಮಾಜಿ ಸಚಿವ ಎಸ್.ಆರ್. ಮೋರೆ ನಿಧನ

By

Published : Dec 9, 2021, 8:54 AM IST

Updated : Dec 9, 2021, 11:19 AM IST

ಧಾರವಾಡ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎಸ್.ಆರ್‌.ಮೋರೆ‌(82) ಧಾರವಾಡ ಎಸ್‌ಡಿ‌ಎಂ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಕಳೆದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.


ನಾಲ್ಕು ಬಾರಿ ಧಾರವಾಡದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಎಸ್.ಆರ್.ಮೋರೆ, ಬಂಗಾರಪ್ಪ ಹಾಗೂ ಧರಂಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದರು. ಬಂಗಾರಪ್ಪ ಸರ್ಕಾರದಲ್ಲಿ ಸಹಕಾರಿ ಸಚಿವ ಹಾಗೂ ಧರಂಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಮೋರೆ ಅವರಿಗೆ ಮೂವರು ಪುತ್ರಿಯರಿದ್ದು, ಒಬ್ಬರು ಅಮೇರಿಕಾದಲ್ಲಿ ಇದ್ದಾರೆ. ಇನ್ನೊಬ್ಬರು ಪೂನಾದಲ್ಲಿ ಹಾಗೂ ಕೊನೆಯವರು ಬೆಂಗಳೂರಲ್ಲಿ ವಾಸವಾಗಿದ್ದಾರೆ ಎಂಬ ಮಾಹಿತಿಯಿದೆ.

ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.

Last Updated : Dec 9, 2021, 11:19 AM IST

ABOUT THE AUTHOR

...view details