ಧಾರವಾಡ:ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಪೂರ್ಣಗೊಂಡಿದೆ.
ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಅಂತ್ಯ : ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರು - ವಿನಯ್ ನ್ಯಾಯಾಂಗ ಬಂಧನ ಅವಧಿ ಅಂತ್ಯ
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಪೂರ್ಣಗೊಂಡಿದೆ. ಇಂದು ಹಿಂಡಲಗಾ ಕೇಂದ್ರ ಕಾರಾಗೃಹದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿನಯ್ ಅವರ ವಿಚಾರಣೆ ನಡೆಯಲಿದೆ.
![ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಅಂತ್ಯ : ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರು ವಿನಯ್ ಕುಲಕರ್ಣಿ](https://etvbharatimages.akamaized.net/etvbharat/prod-images/768-512-9950868-thumbnail-3x2-bng.jpg)
Vinay Kulkarni
ಇಂದು ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದ್ದು, ಹಿಂಡಲಗಾ ಕೇಂದ್ರ ಕಾರಾಗೃಹದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ವಿಚಾರಣೆಗೆ ಹಾಜರುಪಡಿಸಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.
ಈಗಾಗಲೇ ಹೈ ಕೋರ್ಟ್ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ವಿನಯ್ ಜಾಮೀನು ಅರ್ಜಿಗೆ ಸಿಬಿಐಗೆ ತಕರಾರು ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ನಾಳೆ ವಿನಯ್ ಜಾಮೀನು ಅರ್ಜಿ ವಿಚಾರಣೆ ಧಾರವಾಡ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆಗೆ ಬರಲಿದೆ.