ಹುಬ್ಬಳ್ಳಿ:ಗಣೇಶೋತ್ಸವ ಆಚರಣೆಗೆ ಸರ್ಕಾರ ನಿರ್ಬಂಧ ಹೇರಿರುವುದು ಖಂಡನೀಯ. ಕೂಡಲೇ ಸರ್ಕಾರ ಕೋವಿಡ್ ನಿಯಮದ ಪ್ರಕಾರ ಆಚರಣೆಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಆರ್.ವಿ. ದೇಶಪಾಂಡೆ ಒತ್ತಾಯಿಸಿದರು.
ನಗರದಲ್ಲಿಂದು ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಗಣೇಶೋತ್ಸವ ಆಚರಣೆ ಮಾಡುವ ಕಾರಣ ಫೆಂಡಾಲ್, ಲೈಟಿಂಗ್ಸ್, ಹೂವಿನ ವ್ಯಾಪಾರ ನಂಬಿಕೊಂಡು ಜೀವನ ನಡೆಸುವವರಿಗೆ ಅನುಕೂಲವಾಗುತ್ತದೆ. ಅಲ್ಲದೆ ಇದೀಗ ಕೋವಿಡ್ ಸಂಖ್ಯೆ ಕೂಡ ಕಡಿಮೆ ಇರುವ ಕಾರಣ ಕೋವಿಡ್ ನಿಯಮಾನುಸಾರ ಆಚರಣೆಗೆ ಅವಕಾಶ ಮಾಡಿಕೊಡಬೇಕೆಂದು ತಿಳಿಸಿದರು.
ಈ ಹಿಂದೆಯೇ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ, ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸುವಂತೆ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಚಪ್ಪರ/ಪೆಂಡಾಲ್/ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಅಲ್ಲದೆ, ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮ ಸೇರಿದಂತೆ ವಿವಿಧ ಆಚರಣೆಗೆ ಕಡಿವಾಣ ಹೇರಲಾಗಿದೆ.
ಓದಿ: ನಾಳೆ ಸಿಎಂ ಸಭೆ ಬಳಿಕ ಶಾಲಾರಂಭ ಬಗ್ಗೆ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್