ಹುಬ್ಬಳ್ಳಿ : ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ವೇಳೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಐಪಿಎಲ್ ಬೆಟ್ಟಿಂಗ್: ಹುಬ್ಬಳ್ಳಿಯಲ್ಲಿ ನಾಲ್ವರ ಬಂಧನ - ಹುಬ್ಬಳ್ಳಿ ತಾಲೂಕಿನ ಮಾವನೂರು
ಹುಬ್ಬಳ್ಳಿ ತಾಲೂಕಿನ ಮಾವನೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ್ದು, 8,000 ರೂ. ನಗದು ಹಾಗೂ ನಾಲ್ಕು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
Arrest
ಬಸವರಾಜ ಕರಡಿ, ರಾಜು ದೊಂಗಡಿ, ವಿರುಪಕ್ಷಯ್ಯಾ ಪಾಂಚಯ್ಯ, ವೀರಭದ್ರಯ್ಯ ಕೋರಿಯಾನ ಮಠ ಬಂಧಿತ ಆರೋಪಿಗಳು. ಬಂಧಿತರಿಂದ 8,000 ರೂ. ನಗದು ಹಾಗೂ ನಾಲ್ಕು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಮಾವನೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿ ರಮೇಶ್ ಗೋಕಾಕ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.