ಹುಬ್ಬಳ್ಳಿ:ಓವರ್‌ಟೇಕ್ ಮಾಡಲು ಹೋಗಿ ಮುಂದೆ ಬಂದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ನಡೆದಿದೆ.
ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದ್ದು, ಹೋಳಿ ಹಬ್ಬದ ನಿಮಿತ್ತ ಕಾರಿನಲ್ಲಿದ್ದವರು ನವಲಗುಂದ ಕಾಮಣ್ಣನನಿಗೆ ವಿಶೇಷ ಪೂಜೆ ಸಲ್ಲಿಸಿ ಮರಳುತ್ತಿದ್ದರು. ಆಗ ಮುಂದಿರುವ ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ.