ಹುಬ್ಬಳ್ಳಿ(ಧಾರಾವಾಡ):ಇಸ್ಪೀಟ್ ಆಡಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಸೇರಿ ನಾಲ್ವರನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿಯ ಅಕ್ಷಯ ಕಾಲೋನಿಯ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ಇಸ್ಪೀಟ್ ಆಡುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಗೋಕುಲ್ ರೋಡ್ ಠಾಣೆ ಪೊಲೀಸರು ರೆಡ್ ಹ್ಯಾಂಡಾಗಿ ಬಂಧಿಸಿದ್ದರು.
ಹುಬ್ಬಳ್ಳಿ-ಧಾರವಾಡ ಸಿಎಆರ್ ರಿಸರ್ವ್ ಪೊಲೀಸ್ ಇನ್‌ಸ್ಪೆಕ್ಟರ್ (ಆರ್ಪಿಐ) ಸಂತೋಷ ಬೋಜಪ್ಪಗೋಳ, ಸಿಎಆರ್ ಹೆಡ್ ಕಾನ್ಸ್ಟೇಬಲ್ಗಳಾದ ಮುತ್ತಪ್ಪ ಕಾಟನಾಯಕ, ನವೀನ ತೋಪಲಕಟ್ಟಿ, ಪೂರ್ವ ಸಂಚಾರ ಠಾಣೆಯ ಕಾನ್ಸ್ಟೇಬಲ್ ಬಸವಣ್ಯಪ್ಪ ಬಾವಿಹಾಳ ಅಮಾನತುಗೊಂಡವರು. ಸಿಎಆರ್‌ನ ನಿವೃತ್ತ ಹೆಡ್ ಕಾನ್ಸ್ಟೇಬಲ್ ಶ್ರೀಕಾಂತ ಕೂಡ ಸಿಕ್ಕಿಬಿದ್ದಿದ್ದರು.