ಧಾರವಾಡ: ಜಿಲ್ಲೆಯಲ್ಲಿ ಇಂದು ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ. ಈ ಬಗ್ಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ.
ಪಿ-1123 (39,ಪುರುಷ) ಇವರಿಗೆ ಮಹಾರಾಷ್ಟ್ರದ ಮುಂಬೈ ಪ್ರಯಾಣ ಹಿನ್ನೆಲೆ ಇದೆ. ಹಾಗೆಯೇ ಪಿ-1124 (16, ಬಾಲಕ) ಈತ ಪಿ-589 ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನೆಲೆ ಕೊರೊನಾ ತಗುಲಿದೆ.
ಪಿ-1142 ( 28, ಮಹಿಳೆ) ಇವರು ಕೂಡ ಮುಂಬೈ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಹಾಗೆಯೇ ಪಿ-1143 ( 25, ಪುರುಷ) ಇವರು ಕೊಲ್ಹಾಪುರ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಈ ಮೂಲಕ 26ಕ್ಕೆ ಏರಿಕೆಯಾಗಿದೆ. ಈಗಾಗಲೇ 07 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.