ಹುಬ್ಬಳ್ಳಿ:ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡ ವ್ಯಕ್ತಿವೋರ್ವ ನಗರದ ಖ್ಯಾತ ವೈದ್ಯರೊಬ್ಬರ ಪತ್ನಿಯ ಖಾತೆಯಿಂದ ಲಕ್ಷಾಂತರ ರೂ. ಹಣ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬ್ಯಾಂಕ್ ಸಿಬ್ಬಂದಿ ಎಂದು ಫೋನ್ ಮಾಡ್ದ ಖದೀಮ: ಹುಬ್ಬಳ್ಳಿಯಲ್ಲಿ ವೈದ್ಯೆಗೆ ಹಾಕಿದ ನಾಮ - ಹುಬ್ಬಳ್ಳಿಯಲ್ಲಿ ಬ್ಯಾಂಕ್ ಸಿಬ್ಬಂದಿ ಎಂದು ವಂಚನೆ
ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡ ವ್ಯಕ್ತಿವೋರ್ವ, ಲಕ್ಷಾಂತರ ರೂ. ಹಣ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ಬ್ಯಾಂಕ್ ಸಿಬ್ಬಂದಿ ಎಂದು ಹೇಳಿ ಲಕ್ಷಾಂತರ ಹಣ ವರ್ಗಾವಣೆ
ಮೊಬೈಲ್‌ಗೆ ಕರೆ ಮಾಡಿ ತಾನು ಬ್ಯಾಂಕ್ ಸಿಬ್ಬಂದಿ ಎಂದು ಹೇಳಿ, ಬ್ಯಾಂಕ್ ಕೆವೈಸಿ ಅಪಡೇಟ್ ಮಾಡಬೇಕೆಂದು ನಂಬಿಸಿದ್ದಾನೆ. ಬಳಿಕ ಮೊಬೈಲ್‌ಗೆ ಬಂದಿರುವ ಓಟಿಪಿ ನಂಬರ್ ಪಡೆದುಕೊಂಡು, 7 ಲಕ್ಷ ರೂ.ಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ.
ವೈದ್ಯರ ಹಾಗೂ ಅವರ ಪತ್ನಿಯ ಜಂಟಿ ಖಾತೆಯಿಂದ ಹಣ ಕಡಿತಗೊಂಡ ನಂತರ, ಮೊಬೈಲ್ ಫೋನ್‌ಗೆ ಸಂದೇಶ ಬಂದಿದೆ. ಈ ಸಂದರ್ಭದಲ್ಲಿ ಮೋಸ ಹೋಗಿರುವುದು ತಿಳಿದಿದ್ದು, ಈ ಕುರಿತು ಹುಬ್ಬಳ್ಳಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
Fraud in Hubli