ಹುಬ್ಬಳ್ಳಿ:ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ (Shakti Scheme, Free bus travel scheme) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಚಾಲನೆ ನೀಡಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಅಷ್ಟೇ ಅಲ್ಲ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಬಸ್ಗಳಲ್ಲಿ ಲಕ್ಷಕ್ಕೂ ಅಧಿಕ ಮಹಿಳೆಯರು ಪ್ರಯಾಣಿಸಿರುವುದಾಗಿ ಸಂಸ್ಥೆ ಹೇಳಿಕೊಂಡಿದೆ.
ರಾಜ್ಯಾದ್ಯಂತ ಆರಂಭವಾಗಿರುವ ಸರ್ಕಾರಿ ಬಸ್ನಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಮೊದಲ ದಿನ ಭಾರಿ ಪ್ರಮಾಣದಲ್ಲಿ ಮಹಿಳೆಯರು ಪ್ರಯಾಣಿಸಿರುವುದು ಮಾಹಿತಿ ಲಭ್ಯವಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಬಸ್ಗಳಲ್ಲಿ 1.22 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ.
ಸ್ತ್ರೀ ಸಬಲೀಕರಣದ ನಿಟ್ಟಿನಲ್ಲಿ ಭಾನುವಾರ ಜೂನ್ 11ರಂದು ಆರಂಭಿಸಲಾಗಿರುವ ಸರ್ಕಾರಿ ಬಸ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿರುತ್ತದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಉತ್ತರಕನ್ನಡ ಸೇರಿದಂತೆ ಆರು ಜಿಲ್ಲೆಗಳಲ್ಲಿ ಜೂನ್ 11ರಂದು ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಒಟ್ಟು 1,22,354 ಮಹಿಳೆಯರು ಪ್ರಯಾಣಮಾಡಿದ್ದಾರೆ. ಪ್ರಯಾಣ ಮಾಡಿದ ಬಸ್ ಟಿಕೆಟ್ ದರದ ಮೊತ್ತ ರೂ. 36,17,096 ಗಳಾಗಿದೆ. ಸೋಮವಾರದಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಬಹಳಷ್ಟು ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಜಿಲ್ಲಾವಾರು ಮಾಹಿತಿ ಈ ಕೆಳಗಿನಂತಿದೆ..:
ಜಿಲ್ಲೆ | ಮಹಿಳಾ ಪ್ರಯಾಣಿಕರು |
ಧಾರವಾಡ ನಗರ ಸಾರಿಗೆ | 12,354 |
ಧಾರವಾಡ ಗ್ರಮಾಂತರ | 11,780 |
ಬೆಳಗಾವಿ | 34,797 |
ಬಾಗಲಕೋಟೆ | 11,687 |
ಗದಗ | 11,687 |
ಹಾವೇರಿ | 16,656 |
ಉತ್ತರ ಕನ್ನಡ | 8,497 |