ಹುಬ್ಬಳ್ಳಿ:ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಜನಪ್ರತಿನಿಧಿಗಳ ಹಾಗೂ ಪಾಲಿಕೆ ಚುನಾಯಿತ ಪ್ರತಿನಿಧಿಗಳ ದಂಡು ಕೇಂದ್ರ ಸಚಿವರ ಮನೆಯತ್ತ ಆಗಮಿಸುತ್ತಿದ್ದಾರೆ.
ಬಿಜೆಪಿ ಮತ್ತು ಸಂಘದ ಪ್ರಮುಖರು, ಅಧಿಕಾರಿಗಳು ಭಾಗಿಯಾಗಿದ್ದು, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಎಡಿಜಿಪಿ ಅಲೋಕ್ ಕುಮಾರ್, ಪೊಲೀಸ್ ಕಮಿಷನರ್ ಲಾಭೂರಾಮ್, ಪಾಲಿಕೆ ಕಮಿಷನರ್ ಡಾ. ಗೋಪಾಲಕೃಷ್ಣ, ಸದನ ಸಮಿತಿಯ ಐವರು ಹಾಗೂ ಕಾರ್ಪೋರೇಟರ್ಸ್ ಸಹ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.