ಕರ್ನಾಟಕ

karnataka

ETV Bharat / state

ಧಾರವಾಡ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ, ಮೂವರು ಅರೆಸ್ಟ್​ - ಧಾರವಾಡದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಧಾರವಾಡ ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ‌ಕ್ಕೆ ಯತ್ನಿಸಿದ ಮೂವರು ಯುವಕರನ್ನು ಬಂಧಿಸಲಾಗಿದೆ.

gang rape case registered against 3 boys
ದೂರು ದಾಖಲು

By

Published : Feb 21, 2021, 9:44 AM IST

ಧಾರವಾಡ: ಅಪ್ರಾಪ್ತೆ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ‌ ಮಾಡಲು ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಗ್ರಾಮದಲ್ಲಿ ಶಿವಾಜಿ ಜಯಂತಿ ಕಾರ್ಯಕ್ರಮ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ನೋಡಿ ಬಾಲಕಿಯೊಬ್ಬಳು ಮನೆಗೆ ಮರಳುವಾಗ ಮೂವರು ಯುವಕರು ಬಾಲಕಿಯ‌ನ್ನು ಮನೆಯೊಂದರ ಒಳಗೆ ಎಳೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಬಾಲಕಿ ಚೀರಾಡುವ ಧ್ವನಿ ಕೇಳಿದ ಗ್ರಾಮಸ್ಥರು ಕೂಡಲೇ ಅಲ್ಲಿಗೆ ಹೋಗಿ ಯುವಕರಿಗೆ ಬೈದು ಬುದ್ಧಿ ಹೇಳಿ ಕಳುಹಿಸಿಕೊಟ್ಟಿದ್ದಾರೆ. ಇತ್ತ ಅಪ್ರಾಪ್ತೆಯ ಪೋಷಕರು ಧಾರವಾಡ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಮೂವರನ್ನು ಬಂಧಿಸಿ ಕಾನೂನು‌ ಕ್ರಮ ಜರುಗಿಸಿದ್ದಾರೆ.

ಇದನ್ನೂ ಓದಿ:ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ದಿನಾಂಕ ಬದಲಾವಣೆ

ABOUT THE AUTHOR

...view details