ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಕ್ರಿಮಿನಲ್ ಚಟುವಟಿಕೆಗಳ ಹಿಂದೆ ಗಾಂಜಾ ಘಾಟು ಕಂಡುಬಂದಿದೆ.
ಪ್ರಕರಣ-1
ಇತ್ತೀಚೆಗೆ ದೇಶಪಾಂಡೆ ನಗರದ ಯುವಕರ ಗುಂಪೊಂದು ಭವಾನಿ ನಗರ ಯುವಕನನ್ನು ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿತ್ತು. ಈ ಘಟನೆ ಸಂಬಂಧ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದರು. ಅಷ್ಟೇ ಅಲ್ಲದೆ, ಆರೋಪಿಗಳು ಕೊಲೆ ನಡೆಸಿದ್ದ ಸಂದರ್ಭದಲ್ಲಿ ಗಾಂಜಾ ಸೇವನೆ ಮಾಡಿದ್ದರು ಎಂದು ವಿಚಾರ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.