ಧಾರವಾಡ:ಕೊರೊನಾ ವಿರುದ್ಧದ ಹೋರಾಟಕ್ಕೆ ಶ್ರೀಗುರು ಚನ್ನಬಸವ ಶಿವಯೋಗಿ ಮಹಾಸ್ವಾಮಿಗಳಿಂದ ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ ದೇಣಿಗೆ ನೀಡಲಾಯಿತು.
ಗರಗ ಮಡಿವಾಳೇಶ್ವರ ಕಲ್ಮಠ ಟ್ರಸ್ಟ್ನಿಂದ ಕೊರೊನಾ ಪರಿಹಾರ ನಿಧಿಗೆ ದೇಣಿಗೆ... - Shri Guru Channabasava Shivayogi Mahaswamy
ಶ್ರೀಗುರು ಚನ್ನಬಸವ ಶಿವಯೋಗಿ ಮಹಾಸ್ವಾಮಿಗಳಿಂದ ಪ್ರಧಾನ ಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ 25 ಸಾವಿರ ರೂಪಾಯಿಗಳ ಚೆಕ್ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಸಾವಿರ ರೂಪಾಯಿಗಳ ಚೆಕ್‍ನ್ನು ನೀಡಲಾಯಿತು.
ಕೊರೊನಾ ಪರಿಹಾರ ನಿಧಿಗೆ ದೇಣಿಗೆ
ಗರಗದ ಶ್ರೀ ಮಡಿವಾಳೇಶ್ವರ ಕಲ್ಮಠದ ಟ್ರಸ್ಟ್ ವತಿಯಿಂದ ಶ್ರೀಗುರು ಚನ್ನಬಸವ ಶಿವಯೋಗಿ ಮಹಾಸ್ವಾಮಿಗಳಿಂದ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 25 ಸಾವಿರ ರೂಪಾಯಿಗಳ ಚೆಕ್ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಸಾವಿರ ರೂಪಾಯಿಗಳ ಚೆಕ್‍ನ್ನು ನಗರದ ತಹಶೀಲ್ದಾರ ಸಂತೋಷ ಬಿರಾದಾರ ಅವರ ಮೂಲಕ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ಗ್ರಾಮೀಣ ಶಾಸಕ ಅಮೃತ ದೇಸಾಯಿ, ಟ್ರಸ್ಟ್ ಕಾರ್ಯಾಧ್ಯಕ್ಷ ಅಶೋಕ ದೇಸಾಯಿ ಹಾಗೂ ಗರಗ ಹಾಗೂ ಹಂಗರಕಿ ಗ್ರಾಮದ ಪ್ರಮುಖರು ಭಾಗವಹಿಸಿದ್ದರು.