ಹುಬ್ಬಳ್ಳಿ : ಗುರುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪ್ರಕರಣ ಹಸಿಯಾಗಿರುವಾಗಲೇ ಮತ್ತೊಂದು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದಲ್ಲಿ ನಡೆದಿದೆ.
ಸಿಲಿಂಡರ್ ಸ್ಫೋಟಕ್ಕೆ ಮಲ್ಲೇಶಪ್ಪ, ಖಾಸಿಂಸಾಬ್, ದಾವಲ್ ಸಾಬ್, ಅಶೋಕಪ್ಪ ಹಾಗೂ ರಮೇಶಪ್ಪ ಎಂಬುವರಿಗೆ ಸೇರಿದ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮನೆಯಲ್ಲಿ ಯಾರೂ ಇಲ್ಲದಿರುವಾಗ ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾದ ಬೆಂಕಿಯಿಂದ ಸಿಲಿಂಡರ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.