ಹುಬ್ಬಳ್ಳಿ: ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಸ್ಮಾರ್ಟ್ ಸಿಟಿ ಯೋಜನೆ ಅಡಿ ಬರುವ ನಗರದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಯೋಜನೆಯ ಸ್ಥಳಗಳಿಗೆ ವಾಣಿಜ್ಯ, ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಭೇಟಿ - District Secretary Gaurav Gupta
ಸ್ಮಾರ್ಟ್ ಸಿಟಿ ಯೋಜನೆ ಅಡಿ ಬರುವ ನಗರದ ಸ್ಥಳಗಳಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಭೇಟಿ ನೀಡಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗೌರವ್ ಗುಪ್ತ
ಜನತಾ ಬಜಾರ್, ದುರ್ಗದ ಬೈಲಿನ ಎಂ.ಜಿ.ಮಾರುಕಟ್ಟೆ, ಚಿಟಿಗುಪ್ಪಿ ಆಸ್ಪತ್ರೆ, ಇಂದಿರಾ ಗ್ಲಾಸ್ ಹೌಸ್ ಹಾಗೂ ತೋಳಕೆರೆಗೆ ಭೇಟಿ ನೀಡಿದ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್, ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್, ಸ್ಮಾರ್ಟ್ ಸಿಟಿ ಯೋಜನಾಧಿಕಾರಿ ಶಕೀಲ್ ಅಹಮದ್, ಐಎಎಸ್ ಪ್ರೊಬೆಷನರಿ ಅಧಿಕಾರಿ ಆಕೃತಿ ಬನ್ಸಾಲ್, ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ ಮಾಡ್ಯಾಳ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.