ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ತಮ್ಮ ವಾರ್ಡ್ ಸಮಸ್ಯೆಗಳನ್ನು ವ್ಯಕ್ತಪಡಿಸಲು ಸರಿಯಾದ ರೀತಿಯಲ್ಲಿ ಅವಕಾಶ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್ ಚುನಾಯಿತ ಸದಸ್ಯರು ಆಸನವನ್ನು ಬಿಟ್ಟು ಮೇಯರ್ ಪೀಠದ ಮುಂದೆ ಗಲಾಟೆ ನಡೆಸಿದರು.
ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ತಾರತಮ್ಯ ಮಾಡಲಾಗುತ್ತಿದೆ. ಸರಿಯಾದ ರೀತಿಯಲ್ಲಿ ಅವಕಾಶ ನೀಡುತ್ತಿಲ್ಲ. ಅಲ್ಲದೇ ಸಾಕಷ್ಟು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬಂದಿದ್ದು, ಯಾವುದೇ ರೀತಿಯ ಅವಕಾಶ ಸಿಗದೆ ಸಾಮಾನ್ಯ ಸಭೆ ಮುಕ್ತಾಯಗೊಳ್ಳುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಸದಸ್ಯೆ ಸುವರ್ಣ ಕಲಕುಂಟ್ಲ ಆರೋಪಿಸಿದರು. ಅಲ್ಲದೆ ಸದಸ್ಯರು ತಮ್ಮ ಆಸನವನ್ನು ಬಿಟ್ಟು ಮಹಾಪೌರರ ಮುಂದೆ ಬಂದು ಅಸಮಾಧಾನ ಹೊರಹಾಕಿದರು.
ಕಾಂಗ್ರೆಸ್ ಸದಸ್ಯರಿಂದ ಗಲಾಟೆ ಮಹಾನಗರ ಪಾಲಿಕೆ ಸಭೆಯಲ್ಲಿ ಗಮನ ಸೆಳೆಯುವ ಸೂಚನೆಯ ಮೇಲೆ ನಡೆಯುತ್ತಿರುವ ಚರ್ಚೆಯಲ್ಲಿ ನಗರದ ಸ್ವಚ್ಛತೆ, ಕಸ ವಿಲೇವಾರಿ ಬಗ್ಗೆ ವಾಗ್ವಾದ ನಡೆದಿದೆ. ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಇದುವರೆಗೂ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಚರ್ಚೆಗೆ ಬಂದಿಲ್ಲ.
ಇದನ್ನೂ ಓದಿ: ಕಮಿಷನ್ ದಂಧೆ ವಿರುದ್ಧ ಹು-ಧಾ ಪಾಲಿಕೆ ಕ್ರಮ: ಶಾಸಕರ ನೇತೃತ್ವದಲ್ಲಿ ಕಡಿವಾಣ?
ಗುರುಲಿಂಗ ಸ್ವಾಮಿಗೆ ಸಂತಾಪ:ಸಿಎಂ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರು ಹಾಗೂ ಹಿರಿಯ ಪತ್ರಕರ್ತರಾದ ಗುರುಲಿಂಗಸ್ವಾಮಿ ಹೋಳಿಮಠ ಅವರ ಅಗಲಿಕೆಗೆ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸಂತಾಪ ಸೂಚಿಸಲಾಯಿತು. ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರ ಸಮ್ಮುಖದಲ್ಲಿ ಹಾಗೂ ಮೇಯರ್, ಉಪಮೇಯರ್ ಉಪಸ್ಥಿತಿಯಲ್ಲಿ ಮೌನಾಚರಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.