ಧಾರವಾಡ :ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೇಕೆರೆ ನೀರಿನ ಸೆಳವಿನಲ್ಲಿ ತೇಲಿ ಹೋಗಿದ್ದ ಎಂಟು ವರ್ಷದ ಬಾಲಕಿಯ ಮೃತದೇಹ ಇಂದು ಪತ್ತೆಯಾಗಿದೆ.
ಗಂಜಿಗಟ್ಟಿ ನೀರಲ್ಲಿ ತೇಲಿ ಹೋದ ಬಾಲಕಿಯ ಮೃತದೇಹ ಪತ್ತೆ - Dharwad latest news
ಇಂದು ಬಾಲಕಿಯ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಬಾಲಕಿಯ ಕುಟುಂಬಕ್ಕೆ ಶೀಘ್ರವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು..
Girl dead body ಬಾಲಕಿಯ ಮೃತದೇಹ ಪತ್ತೆ
ಆಗಸ್ಟ್ 6 ರಂದು 8 ವರ್ಷದ ಶ್ರೀದೇವಿ ಹನುಮಂತಪ್ಪ ಗಾಣಿಗೇರ ಎಂಬ ಬಾಲಕಿ ನೀರಿನ ಸೆಳವಿಗೆ ಸಿಕ್ಕು ತೇಲಿ ಹೋಗಿದ್ದಳು. ಅಂದಿನಿಂದ ನಿರಂತರವಾಗಿ ಎನ್ಡಿಆರ್ಎಫ್ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.
ಇಂದು ಬಾಲಕಿಯ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಬಾಲಕಿಯ ಕುಟುಂಬಕ್ಕೆ ಶೀಘ್ರವೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ತಿಳಿಸಿದ್ದಾರೆ.