ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸಂಬಂಧಿಯಿಂದಲೇ ಗರ್ಭವತಿಯಾದ ಅಪ್ರಾಪ್ತೆ - ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದು ಗರ್ಭಿಣಿಯಾಗಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ.

girl-pregnant-after-sexual-abuse-in-hubballi
ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸಂಬಂಧಿಯಿಂದಲೇ ಗರ್ಭವತಿಯಾದ ಅಪ್ರಾಪ್ತೆ

By

Published : Nov 26, 2022, 3:55 PM IST

ಹುಬ್ಬಳ್ಳಿ:14 ವರ್ಷದ ಬಾಲಕಿ ಜೊತೆ ದೈಹಿಕ ಸಂಪರ್ಕ ನಡೆಸಿ, ಗರ್ಭ ಧರಿಸಲು ಕಾರಣವಾದ ಯುವಕನ ವಿರುದ್ಧ ಇಲ್ಲಿನ ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕಳೆದ 15 ದಿನಗಳಿಂದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿತ್ತು. ಬಳಿಕ ಅವಳನ್ನು ತಾಯಿಯು ಚಿಕಿತ್ಸೆಗೆ ಎಂದು ಕಿಮ್ಸ್‌ಗೆ ಕರೆದುಕೊಂಡು ಹೋಗಿದ್ದರು. ಆಗ ಬಾಲಕಿ ಗರ್ಭಿಣಿ ಆಗಿರುವುದು ಗೊತ್ತಾಗಿದೆ.

ಬಳಿಕ ಬಾಲಕಿಯ ತಾಯಿಯು ಪೊಲೀಸರಿಗೆ ದೂರು ನೀಡಿದ್ದಾರೆ. ತನ್ನ ಅಣ್ಣನ ಮಗನೇ ಆಗಾಗ ಮನೆಗೆ ಬರುತ್ತಿದ್ದ. ಯಾರೂ ಇಲ್ಲದಾಗ ಆತ ನನ್ನ ಮಗಳನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ವಿದ್ಯಾರ್ಥಿನಿ, ಶಿಕ್ಷಕಿಯರ ಜೊತೆ ಅಸಭ್ಯ ವರ್ತನೆ.. ಕ್ಯಾಬ್​ ಚಾಲಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಕಾಫಿನಾಡ ಜನ

ABOUT THE AUTHOR

...view details