ಕರ್ನಾಟಕ

karnataka

ETV Bharat / state

ಮೃತ ಬೋಗೂರ ಬಾಲಕಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ವಿನಯ್ ಕುಲಕರ್ಣಿ - ಲೈಂಗಿಕ ದೌರ್ಜನ್ಯ

ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Girl rape and suicide case
ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ವಿನಯ್ ಕುಲಕರ್ಣಿ

By

Published : Aug 10, 2020, 9:36 PM IST

ಧಾರವಾಡ:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆಗೆ ಮೂಕ ಸಾಕ್ಷಿಯಾದ ತಾಲೂಕಿನ ಬೋಗೂರ ಗ್ರಾಮದಲ್ಲಿ ಮೌನ ಆವರಿಸಿದೆ. ರಾಜ್ಯಾದ್ಯಂತ ಅತ್ಯಾಚಾರಿಗೆ ಕಠಿಣ ಶಿಕ್ಷೆಯಾಗಬೇಕೆಂಬ ಆಂದೋಲನ ಶುರುವಾಗಿದೆ.

ಈ ಮಧ್ಯೆ ಮೃತ ಬಾಲಕಿಯ ಮನೆಗೆ ಇಂದು ಭೇಟಿ ನೀಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ವೈಯಕ್ತಿಕವಾಗಿ 20 ಸಾವಿರ ರೂ. ಪರಿಹಾರ ನೀಡಿದರು.

ಧಾರವಾಡ ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿ ಮಾಡಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details