ಹುಬ್ಬಳ್ಳಿ:ಮಹದಾಯಿ ವಿಚಾರದಲ್ಲಿ ಮತ್ತೆ ಗೋವಾ ಸರ್ಕಾರದಿಂದ ಕ್ಯಾತೆ ಶುರುವಾಗಿದೆ. ಕಳಸಾ ಬಂಡೂರಿ ನಾಲೆಗಳ ಮೂಲಕ ನೀರನ್ನು ಅಕ್ರಮವಾಗಿ ತಿರುಗಿಸಲಾಗುತ್ತಿದೆ ಎಂದು ಆರೋಪ ಮಾಡಿರುವ ಗೋವಾ ಸರ್ಕಾರ, ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಗೆ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುವ ಮೂಲಕ ಉದ್ಧಟತನ ಮೆರೆದಿದೆ.
ಕರ್ನಾಟಕ ನೀರು ತಿರುಗಿಸಿದೆ ಎನ್ನಲಾದ ವಿಡಿಯೋ ಸಾಕ್ಷ್ಯಗಳನ್ನಿಟ್ಟುಕೊಂಡು ಕೋರ್ಟ್ ಮೆಟ್ಟಿಲೇರಿದ ಗೋವಾ ಸಿಎಂ ಪ್ರಮೋದ್ ಸಾವಂತ್ ಮಹದಾಯಿಗಾಗಿ ಹೋರಾಟ ಮುಂದುವರೆಸುವುದಾಗಿ ಹೇಳಿಕೆ ನೀಡಿದ್ದಾರೆ. ಮಹದಾಯಿ ಐತೀರ್ಪು ಪ್ರಶ್ನಿಸಿ ಗೋವಾ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಹಂತದಲ್ಲಿದ್ದಾಗ ನೀರು ತಿರುಗಿಸಿ ಕರ್ನಾಟಕ ನ್ಯಾಯಾಂಗ ನಿಂದನೆ ಮಾಡಿದೆ ಎನ್ನುವ ಆರೋಪ ಮಾಡಿದ ಗೋವಾ ಸಿಎಂ ಪ್ರಮೋದ್ ಸಾವಂತ್ ಮತ್ತೆ ಮಹದಾಯಿ ಕಿಚ್ಚು ಹೊತ್ತಿಸಿದ್ದಾರೆ.