ಧಾರವಾಡ: ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ವೈದ್ಯರನ್ನು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಅಮಾನುಷವಾಗಿ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಪಿಸಿದೆ.
ಸರ್ಕಾರಿ ವೈದ್ಯರನ್ನು ಅಮಾನುಷವಾಗಿ ನೋಡಿಕೊಳ್ಳಲಾಗುತ್ತಿದೆ: ವೈದ್ಯಾಧಿಕಾರಿಗಳ ಸಂಘ ಆರೋಪ - ಧಾರವಾಡ ಜಿಲ್ಲಾಧಿಕಾರಿಗೆ ವೈದ್ಯರ ಮನವಿ ನ್ಯೂಸ್
ಕೊರೊನಾ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಸರ್ಕಾರ ಗುರಿ ನೀಡುವ ಮೂಲಕ ಕೊರೊನಾ ವಾರಿಯರ್ಸ್ಗಳಾದ ಸರ್ಕಾರಿ ವೈದ್ಯರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಧಾರವಾಡದಲ್ಲಿ ಡಿಸಿಯವರ ಮೂಲಕ ಸಿಎಂ ಯಡಿಯೂರಪ್ಪಗೆ ಮನವಿ ಸಲ್ಲಿಸಲಾಗಿದೆ.
![ಸರ್ಕಾರಿ ವೈದ್ಯರನ್ನು ಅಮಾನುಷವಾಗಿ ನೋಡಿಕೊಳ್ಳಲಾಗುತ್ತಿದೆ: ವೈದ್ಯಾಧಿಕಾರಿಗಳ ಸಂಘ ಆರೋಪ government doctors alligations government](https://etvbharatimages.akamaized.net/etvbharat/prod-images/768-512-8507991-271-8507991-1598025926822.jpg)
ಸಂಘದ ವತಿಯಿಂದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.ವೈದ್ಯಾಧಿಕಾರಿಗಳ ಸಂಘದ ವೈದ್ಯರು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ವೈದ್ಯರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ..ಇಂತಹ ಸಂದರ್ಭದಲ್ಲಿ ಕೆಲ ವೈದ್ಯರು ಮೃತಪಡುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾಡಳಿತ ವೈದ್ಯರಿಗೆ ಆತ್ಮಸ್ಥೈರ್ಯ ತುಂಬಬೇಕು. ವೈದ್ಯರನ್ನು ಮಾನವೀಯತೆ ದೃಷ್ಟಿಯಿಂದ ನೋಡಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಸರ್ಕಾರ ನಿಗದಿತ ಗುರಿ ನೀಡಿ ಗುರಿ ಸಾಧಿಸಲು ನಿರಂತರ ಕಿರುಕುಳ ನೀಡುತ್ತಿದ್ದು, ಇದಕ್ಕೆ ಉದಾಹರಣೆ ಎಂಬಂತೆ ನಂಜನಗೂಡಿನ ಪ್ರಭಾರ ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದ್ದರಿಂದ ಅವರ ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಯ ವಿರುದ್ದ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ವೈದ್ಯರಿಗೆ ಸೂಕ್ತ ರಕ್ಷಣೆ ನೀಡದಿದ್ದಲ್ಲಿ ಆ. 24 ರಿಂದ ತುರ್ತು ಚಿಕಿತ್ಸೆ ಹೊರತುಪಡಿಸಿ, ಯಾವುದೇ ಕೊವೀಡ್ - 19 ವರದಿ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.