ಕರ್ನಾಟಕ

karnataka

ETV Bharat / state

ಧಾರವಾಡ ಎಸ್‌ಡಿಎಂ ಕಾಲೇಜಿನಲ್ಲಿ ಕೋವಿಡ್‌ ಅಬ್ಬರ: ಪರೀಕ್ಷೆ ಹೆಚ್ಚಿಸಲು ಸರ್ಕಾರ ಸೂಚನೆ

ಕಳೆದ ಮೂರ್ನಾಲ್ಕು ದಿನದಿಂದ ಧಾರವಾಡದ ಎಸ್‌ಡಿಎಂ ಕಾಲೇಜಿನಲ್ಲಿ ಕೋವಿಡ್‌ ಸೋಂಕು ಅಬ್ಬರಿಸುತ್ತಿದೆ. ಮೊದಲು 66 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಬಳಿಕ 182 ವಿದ್ಯಾರ್ಥಿಗಳಲ್ಲಿ ಕೋವಿಡ್‌ ಕಂಡುಬಂದಿದೆ. ಈಗ ಒಟ್ಟು 306 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಪ್ರತಿನಿತ್ಯ 5,000 ಮಂದಿಗೆ ಕೋವಿಡ್​ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

dharwad, ಧಾರವಾಡ
dharwad

By

Published : Nov 28, 2021, 10:39 AM IST

ಧಾರವಾಡ: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ‌ ಸಂಖ್ಯೆ ಹೆಚ್ಚಾಗುತ್ತಿದ್ದು, ಪರೀಕ್ಷೆಯನ್ನೂ ಸಹ ಹೆಚ್ಚಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮುನ್ನ ಪ್ರತಿನಿತ್ಯ 500 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿತ್ತು. ಆದರೀಗ ಸರ್ಕಾರ, ಪ್ರತಿನಿತ್ಯ 5,000 ಪರೀಕ್ಷೆ ನಡೆಸುವಂತೆ ಸೂಚಿಸಿದೆ. ಎಸ್‌.ಡಿ.ಎಂ ಕಾಲೇಜಿನಲ್ಲಿ 306 ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದ್ದು ಆಸ್ಪತ್ರೆಯ ಕಂಟೇನ್ಮೆಂಟ್​ಗೆ ಸಿಎಂ ಈ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಧಾರವಾಡದ SDM ಮೆಡಿಕಲ್ ಕಾಲೇಜಿನ 116 ವಿದ್ಯಾರ್ಥಿಗಳಿಗೆ ಕೊರೊನಾ: ಒಟ್ಟು ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆ

ಆಸ್ಪತ್ರೆಯಲ್ಲಿ ಕಂಟೇನ್ಮೆಂಟ್ ಝೋನ್ ಮಾಡಲಾಗಿದ್ದು, ಜಿಲ್ಲಾಡಳಿತ ನ.29 ರವರೆಗೆ ಓಪಿಡಿ‌ ಸೇವೆಯನ್ನು ಸ್ಥಗಿತಗೊಳಿಸಿದೆ. ಇದೀಗ, ತುರ್ತು ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details