ಧಾರವಾಡ: ರಾಜ್ಯ ಸರ್ಕಾರ ಮುಸ್ಲಿಂ ಕಾಲೇಜುಗಳನ್ನು ನಿರ್ಮಾಣ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ 10 ಮುಸ್ಲಿಂ ಕಾಲೇಜುಗಳನ್ನು ಆರಂಭ ಮಾಡಲು ಹೊರಟಿರುವುದು ಖಂಡನೀಯ ಎಂದು ಸರ್ಕಾರದ ವಿರುದ್ಧ ಮುತಾಲಿಕ್ ಹರಿಹಾಯ್ದಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರವನ್ನು ನಾನು ಬಲವಾಗಿ ವಿರೋಧ ಮಾಡ್ತೇನೆ. ಎಲ್ಲಾ ಹಿಂದೂ ಸಂಘಟನೆಗಳ ಒಕ್ಕೂಟದಿಂದ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಅವರು ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಈ ಕಾಲೇಜು ಬಗ್ಗೆ ಸರ್ಕಾರ ನಿರ್ಧಾರ ಮಾಡಿದ್ದನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.