ಹುಬ್ಬಳ್ಳಿ:ಸ್ಟೇರಿಂಗ್ ರಾಡ್ ತುಂಡಾಗಿ ಸಾರಿಗೆ ಬಸ್ಸೊಂದು ನಿಯಂತ್ರಣ ತಪ್ಪಿ ಹುಬ್ಬಳ್ಳಿ-ಗದಗ ರಸ್ತೆ ರಿಂಗ್ ರೋಡ್ ಬಳಿಯ ಐಟಿಸಿ ಗೋಡಾನ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗದಗದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಚಲಿಸುತ್ತಿದ್ದಾಗ ಸ್ಟೇರಿಂಗ್ ಕಟ್ ಆಗಿದೆ. ನಿಯಂತ್ರಣ ಕಳೆದುಕೊಂಡು ಗೋಡಾನ್ ಗೋಡೆಗೆ ಗುದ್ದಿದೆ. ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿ: ಗೋಡಾನ್ ಗೋಡೆಗೆ ಸಾರಿಗೆ ಬಸ್ ಡಿಕ್ಕಿ; 15ಕ್ಕೂ ಹೆಚ್ಚು ಮಂದಿಗೆ ಗಾಯ - Etv Bharat Kannada
ಸಾರಿಗೆ ಬಸ್ಸಿನ ಸ್ಟೇರಿಂಗ್ ತುಂಡಾಗಿ ಗೋಡಾನ್ ಗೋಡೆಗೆ ಡಿಕ್ಕಿ ಹೊಡೆದಿದ್ದು ಹಲವು ಪ್ರಯಾಣಿಕರು ಗಾಯಗೊಂಡರು.
ಸಾರಿಗೆ ಬಸ್ ಅಪಘಾತ
ಹುಬ್ಬಳ್ಳಿ-ಗದಗ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿರುತ್ತದೆ. ಗೋಡೆಗೆ ಡಿಕ್ಕಿ ಹೊಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಬೆಂಗಳೂರು: ಆಟೋಗೆ ಬೈಕ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ- ಸಿಸಿಟಿವಿ ದೃಶ್ಯ