ಕರ್ನಾಟಕ

karnataka

ETV Bharat / state

ಅಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ಪ್ರಹ್ಲಾದ್ ಜೋಶಿ - ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ

ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಘಟನಾವಳಿ ಸಂಬಂಧ ಮಾತನಾಡಿರುವ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಅಲ್ಲಿರುವ ಭಾರತೀಯರ ರಕ್ಷಣೆಗೆ ಭಾರತ ಎಂದಿಗೂ ಬದ್ಧವಾಗಿದೆ ಎಂದರು.

prahlad-joshi
ಪ್ರಹ್ಲಾದ್ ಜೋಶಿ

By

Published : Aug 17, 2021, 1:15 PM IST

ಹುಬ್ಬಳ್ಳಿ:ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಹತೋಟಿ ಮೀರಿದೆ, ಇದು ಅತ್ಯಂತ ಕಳವಳಕಾರಿ ಬೆಳವಣಿಗೆಯಾಗಿದೆ. ಅಲ್ಲಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಎಲ್ಲಾ ಪ್ರಯತ್ನಗಳನ್ನೂ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಅಫ್ಘಾನಿಸ್ತಾನದಲ್ಲಿ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಏರ್​ಸ್ಪೇಸ್ ಅನ್ನು ಸಹ ಬಂದ್ ಮಾಡಲಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಭಾರತೀಯರನ್ನು ದೇಶಕ್ಕೆ ಕರೆತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮುಂದುವರಿಸಿದೆ. ಅಲ್ಲಿರುವ ಭಾರತದ ಪ್ರತಿಯೊಬ್ಬ ಪ್ರಜೆಯ ಬಗ್ಗೆಯೂ ನಮ್ಮ ಸರ್ಕಾರಕ್ಕೆ ಕಾಳಜಿ ಇದೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ನಿಭಾಯಿಸಲು ಶಕ್ತಿಯುತವಾಗಿದೆ. ಕಳೆದ 7 ವರ್ಷಗಳಲ್ಲಿ ದೇಶದ ಒಳಗಡೆ ಒಂದೇ ಒಂದು ಉಗ್ರ ಚಟುವಟಿಕೆ ನಡೆಸಲು ಬಿಟ್ಟಿಲ್ಲ. ಗಡಿಯಲ್ಲಿ ಸಣ್ಣಪುಟ್ಟ ಘಟನೆಗಳು ನಡೆದಿರುವುದನ್ನು ಬಿಟ್ಟರೆ ದೇಶದೊಳಗೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಉಗ್ರಗಾಮಿಗಳ ವಿಷಯದಲ್ಲಿ ಝೀರೋ ಟಾಲರೆನ್ಸ್ ಘೋಷಣೆ ನಮ್ಮದಾಗಿದೆ.

ಯಾವ ಕಾಲದಲ್ಲಿಯೂ ನಮ್ಮ ಪೊಲೀಸ್ ಬಲ, ಅರೆ ಸೈನಿಕರು, ಸೇನಾ ಪಡೆಯ ಆತ್ಮಬಲ ಕುಂದಿಸುವ ಪ್ರಯತ್ನ ಮಾಡಿಲ್ಲ. ಪೊಲೀಸ್ ಬಲ, ಪೊಲೀಸ್ ಟೆಕ್ನಾಲಜಿಯನ್ನು ಸುಧಾರಿಸಲು ಭಾರತ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಜೋಶಿ ಸರ್ಕಾರದ ಕ್ರಮಗಳನ್ನು ವಿವರಿಸಿದರು.

ಇದನ್ನೂ ಓದಿ:ಕೃಷಿ ಕಾಯ್ದೆ ವಿರೋಧಿಸುವವರು ರೈತರಲ್ಲ, ದಲ್ಲಾಳಿಗಳು: ಸಚಿವೆ ಶೋಭಾ ಕರಂದ್ಲಾಜೆ

ABOUT THE AUTHOR

...view details