ಹುಬ್ಬಳ್ಳಿ:ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆ ಆರ್ಥಿಕತೆಯನ್ನು ಅವಲಂಬಿಸಿದ್ದು, ಉಪಚುನಾವಣೆ ನಂತರ ಆರ್ಥಿಕ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದ್ದರೆ, ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆಗೆ ಅವಕಾಶಗಳಿವೆ ಎಂದು ಹೇಳಿದ್ದಾರೆ.