ಕರ್ನಾಟಕ

karnataka

ETV Bharat / state

Gruha Jyoti scheme: 20 ಲಕ್ಷ ದಾಟಿದ ಗೃಹ ಜ್ಯೋತಿ ನೋಂದಣಿ.. ಹೆಸ್ಕಾಂ ಇಲಾಖೆ ದಾಖಲೆ - etv bharat kannada

ಗೃಹ ಜ್ಯೋತಿ ಯೋಜನೆಗಾಗಿ 20 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಗ್ರಾಹಕರು ನೋಂದಣಿ ಮಾಡಿಸಿದ್ದಾರೆ.

20 ಲಕ್ಷ ದಾಟಿದ ಗೃಹ ಜ್ಯೋತಿ ನೋಂದಣಿ
20 ಲಕ್ಷ ದಾಟಿದ ಗೃಹ ಜ್ಯೋತಿ ನೋಂದಣಿ

By

Published : Jul 5, 2023, 2:04 PM IST

ಹುಬ್ಬಳ್ಳಿ:ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಾರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಗೃಹ ಜ್ಯೋತಿ ಯೋಜನೆಯಲ್ಲಿಯೂ ಕೂಡ ಜನರಿಗೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಸಾಕಷ್ಟು ಸರ್ವರ್ ಸಮಸ್ಯೆಗಳ ನಡುವೆಯೂ ಹೆಸ್ಕಾಂ ಇಲಾಖೆಯಲ್ಲಿ 20 ಲಕ್ಷ ಗ್ರಾಹಕರು ನೋಂದಣಿ ಮಾಡಿಸಿದ್ದಾರೆ.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿಯೇ 20 ಲಕ್ಷ ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿದ್ದಾರೆ. ಈಗಾಗಲೇ ಕರ್ನಾಟಕ ಒನ್, ಹುಬ್ಬಳ್ಳಿ ಧಾರವಾಡ ಒನ್ ಮೂಲಕ ಹಾಗೂ ಆನ್​ಲೈನ್ ಸೆಂಟರ್​ನಲ್ಲಿ ಸರತಿ ಸಾಲಿನಲ್ಲಿ ನಿಂತು 20 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಗ್ರಾಹಕರು ನೋಂದಣಿ ಮಾಡಿಸಿದ್ದಾರೆ.

20 ಲಕ್ಷ ದಾಟಿದ ಗೃಹ ಜ್ಯೋತಿ ನೋಂದಣಿ

ಇನ್ನು, 200 ಯುನಿಟ್ ವಿದ್ಯುತ್ ಉಚಿತ ಘೋಷಣೆ ಬೆನ್ನಲ್ಲೇ ಇಂತಹದೊಂದು ನೋಂದಣಿ ಕಾರ್ಯಕ್ಕೆ ಸರ್ಕಾರ ಮುನ್ನುಡಿ ಬರೆದಿದ್ದು, ಜನಸ್ಪಂದನೆ ಕೂಡ ಅಧಿಕವಾಗಿದೆ. ಈಗಾಗಲೇ ಉಚಿತ ಪ್ರಯಾಣದ ಲಾಭ ಪಡೆದಿರುವ ಮಹಿಳೆಯರು ಸರ್ಕಾರದ ಯೋಜನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಈಗ ಗೃಹ ಜ್ಯೋತಿ ಯೋಜನೆ ಲಾಭ ಪಡೆಯಲು ಸಾರ್ವಜನಿಕರು ಮುಂದಾಗಿರುವುದು ವಿಶೇಷವಾಗಿದೆ.

ಶಕ್ತಿ ಯೋಜನೆ : ಜುಲೈ 3ರಂದು ಅತಿ ಹೆಚ್ಚು 15.92 ಲಕ್ಷ ಮಹಿಳೆಯರು ಪ್ರಯಾಣ.."ಶಕ್ತಿ" ಯೋಜನೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಜುಲೈ 3ರಂದು ಅತಿ ಹೆಚ್ಚು 15.92 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದು, ಟಿಕೆಟ್ ಮೌಲ್ಯ ರೂ.4.36 ಕೋಟಿ ಗಳಾಗಿದೆ. ಇದುವರೆಗೆ ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ 2.99 ಕೋಟಿಗಳಾಗಿದ್ದು, ಪ್ರಯಾಣದ ಟಿಕೆಟ್ ಮೌಲ್ಯ ರೂ. 77.07 ಕೋಟಿಗಳಾಗಿದೆ.

ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಆರಂಭಿಸಲಾಗಿರುವ ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ನಿರೀಕ್ಷೆಗೂ ಮೀರಿ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಯೋಜನೆ ಜಾರಿಯಾಗಿ 23 ದಿನ‌ ಕಳೆದರೂ ಮಹಿಳೆಯರ ಉತ್ಸಾಹ ಹಾಗೆ ಇದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಆರು ಜಿಲ್ಲೆಗಳ 9 ಸಾರಿಗೆ ವಿಭಾಗಗಳ ಬಸ್ಸುಗಳಲ್ಲಿ ಜುಲೈ 3 ರಂದು ತಿಂಗಳ ಮೊದಲ ಸೋಮವಾರ ಅತೀ ಹೆಚ್ಚು 15,92,310 ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ.

ಪ್ರಯಾಣದ ಟಿಕೆಟ್ ಮೌಲ್ಯ ರೂ. 4,36,20,674 ಗಳಾಗಿದೆ. ಜೂನ್ 11ರಿಂದ ಜುಲೈ 3 ರವರೆಗೆ ಒಟ್ಟು 2,99,44,773 ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 77,07,42,689 ಗಳಾಗಿದೆ.

ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಜೊತೆಗೆ ಪುರುಷ ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು, ಒಟ್ಟಾರೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಶಕ್ತಿ ಯೋಜನೆ ಜಾರಿಗೆ ಮೊದಲು ಜೂನ್ 5 ರಂದು ತಿಂಗಳ ಮೊದಲ ಸೋಮವಾರ ಮಹಿಳೆಯರು ಹಾಗೂ ಪುರುಷರು ಸೇರಿದಂತೆ ಒಟ್ಟು 19.57 ಲಕ್ಷ ಜನರು ಪ್ರಯಾಣ ಮಾಡಿದ್ದರು.

ಜುಲೈ 3ರಂದು ತಿಂಗಳ ಮೊದಲ ಸೋಮವಾರ 15.92 ಲಕ್ಷ ಮಹಿಳೆಯರು ಹಾಗೂ 11.01ಲಕ್ಷ ಪುರುಷರು ಸೇರಿದಂತೆ ಒಟ್ಟು 26.93 ಲಕ್ಷ ಜನರು ಪ್ರಯಾಣ ಮಾಡಿದ್ದಾರೆ. ಯೋಜನೆ ಜಾರಿಗೆ ಮೊದಲು ಒಟ್ಟು ಪ್ರಯಾಣಿಕರಲ್ಲಿ ಮಹಿಳೆಯರ ಪ್ರಮಾಣ ಶೇಕಡಾ 40 ರಿಂದ 45 ರಷ್ಟು ಎಂದು ಅಂದಾಜಿಸಲಾಗಿತ್ತು. ಈಗ ಅದು ಶೇಕಡಾ 59ಕ್ಕೆ ಏರಿಕೆಯಾಗಿದೆ ಎಂದು NWKRTC ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಸರ್ಕಾರದ ಗ್ಯಾರಂಟಿ ಯೋಜನೆಗಳ ವಿಚಾರ.. ಧರಣಿ ಕೈಬಿಟ್ಟ ಬಿಜೆಪಿ ಸದಸ್ಯರು

ABOUT THE AUTHOR

...view details