ಧಾರವಾಡ: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವವರ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಧಾರವಾಡದಲ್ಲಿ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
‘ದಯವಿಟ್ಟು ನಮ್ಮನ್ನ ಕಾಯಂಗೊಳಿಸಿ’: ಅತಿಥಿ ಉಪನ್ಯಾಸಕ ಪ್ರತಿಭಟನೆ
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಧಾರವಾಡ ಜಿಲ್ಲೆಯ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು.
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಧಾರವಾಡ ಜಿಲ್ಲೆಯ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು.
ರಾಜ್ಯದಲ್ಲಿರುವ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 12 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು, ಸಂಕಷ್ಟದಲ್ಲಿಯೇ ಸೇವೆ ಸಲ್ಲಿಸುತ್ತಿದ್ದಾರೆ. ಕಾಲ ಕಾಲಕ್ಕೆ ಸರಿಯಾಗಿ ಗೌರವ ಧನ ಲಭಿಸದೇ ಇದ್ದರೂ ಕೂಡ ಶೈಕ್ಷಣಿಕ ಚಟುವಟಿಕೆಗಳಲ್ಲ ಕ್ರಿಯಾಶೀಲರಾಗಿದ್ದು, ಪ್ರತಿ ವರ್ಷ 3 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯ ಮಾಡುತ್ತಿದ್ದೇವೆ. ಹಾಗಾಗಿ ತಮ್ಮನ್ನು ಕಾಯಂಗೊಳಿಸಬೇಕು ಎಂದು ಮನವಿ ಪತ್ರದ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.