ಧಾರವಾಡ:ಹೊಸ ವರ್ಷಾಚರಣೆಗೆ ಸಂತೋಷಕೂಟಗಳ ಆಯೋಜನೆ ಸರ್ವೇ ಸಾಮಾನ್ಯ ಎಂಬಂತಾಗಿದೆ. ಆದರೆ ಇಂಥ ಮೋಜಿನ ಗುಂಗಲ್ಲಿ ಅಪರಾಧಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತವೆ. ಈ ಕಾರಣದಿಂದ ಕೂಟಗಳನ್ನು ಆಯೋಜಿಸುವವರಿಗೆ ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಅಬಕಾರಿ ಇಲಾಖೆ ವತಿಯಿಂದ ಸಭೆ ನಡೆಸಿ ಮಾರ್ಗದರ್ಶನ ನೀಡಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ತಿಳಿಸಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೈಸನ್ಸ್ ಹೊಂದಿದ ರೆಸಾರ್ಟ್ ಹಾಗೂ ಹೋಟೆಲ್ಗಳಲ್ಲಿ ಪ್ರತಿ ದಿನದ ಸಮಯಕ್ಕಿಂತ ಅರ್ಧ ಗಂಟೆ ಮಾತ್ರ ಹೆಚ್ಚು ಸಮಯ ನೀಡಿದ್ದೇವೆ. ಅಷ್ಟರಲ್ಲೇ ಅವರು ಎಲ್ಲಾ ಪಾರ್ಟಿ ಮುಗಿಸಬೇಕು. ವರ್ಷಾಚರಣೆಯಲ್ಲಿ ಮಹಿಳೆಯರ ಬಗ್ಗೆ ಹೆಚ್ಚಿನ ಕಾಳಜಿ ಹರಿಸಬೇಕು. ಪಾರ್ಟಿ ನೆಪದಲ್ಲಿ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.