ಹುಬ್ಬಳ್ಳಿ:ಕೊರೊನಾ ಮಹಾಮಾರಿಯಿಂದ ಎಲ್ಲಾ ಕ್ಷೇತ್ರಗಳು ನಲುಗಿಹೋಗಿದ್ದು, ಜಿಮ್ ಮಾಲೀಕರು ಸಹ ಆದಾಯವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಆದರೆ ರಾಜ್ಯ ಹಾಗೂ ಕೇಂದ್ರ ಸರಕಾರ ಜಿಮ್ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿದ್ದರಿಂದ ಮಾಲೀಕರು ಸಂತಸದ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಜಿಮ್ ಮತ್ತೆ ಪ್ರಾರಂಭ: ಕೊರೊನಾ ಮುಂಜಾಗ್ರತಾ ಕ್ರಮ ಕೈಗೊಂಡ ಮಾಲೀಕರು
ಲಾಕ್ಡೌನ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಜಿಮ್ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜಿಮ್ ಮಾಲೀಕರು ವಸ್ತುಗಳ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಕೊರೊನಾ ಭಾರತದಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೇಶವನ್ನು ಸಂಪೂರ್ಣ ಲಾಕ್ಡೌನ್ ಮಾಡಿ ಅಗತ್ಯ ವಸ್ತುಗಳನ್ನು ಹೊರತು ಎಲ್ಲ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿತ್ತು. ಇದರಿಂದ ಜಿಮ್ಗಳನ್ನು ನಂಬಿ ಜೀವನ ಸಾಗಿಸುತ್ತಿದ್ದ ಕುಟುಂಬಗಳು ಕಳೆದ ನಾಲ್ಕು ತಿಂಗಳಿನಿಂದ ಕೈಯಲ್ಲಿ ಕೆಲಸವಿಲ್ಲದೆ ಜೀವನ ನಡೆಸುವುದು ಕಷ್ಟವಾಗಿತ್ತು. ಆದರೆ ಈಗ ಕೇಂದ್ರ ಸರಕಾರದ ಆದೇಶ ಹಾಗೂ ರಾಜ್ಯ ಸರಕಾರ ಮಾರ್ಗಸೂಚಿಯಂತೆ ಜಿಮ್ ತೆರೆಯಲು ಅನುಮತಿ ನೀಡಿದೆ. ಇದರಿಂದ ಜಿಮ್ ಮಾಲೀಕರ ಮುಖದಲ್ಲಿ ಮಂದಹಾಸ ಮೂಡಿದೆ.
ಪ್ರತಿದಿನ ಜಿಮ್ಗಳಿಗೆ ಸ್ಯಾನಿಟೈಸಿಂಗ್ ಮಾಡುವುದು, ಸರಕಾರದ ಮಾರ್ಗದರ್ಶನದಂತೆ ಜಿಮ್ಗೆ ಬರುವ ಎಲ್ಲರೂ ಮಾಸ್ಕ್ ಧರಿಸಬೇಕು. ಬಳಿಕ ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಿ ಪ್ರವೇಶಕ್ಕೆ ಅನುಮತಿ ನೀಡಲು ಸಂಪೂರ್ಣ ಸಿದ್ದತೆ ನಡೆಸಲಾಗಿದೆ ಎಂದು ಜಿಮ್ ಮಾಲೀಕರು ತಿಳಿಸಿದ್ದಾರೆ.