ಕರ್ನಾಟಕ

karnataka

ETV Bharat / state

ಯಡಿಯೂರಪ್ಪಗೇ ಅಧಿಕಾರದ ವ್ಯಾಮೋಹ ಇರುವಾಗ ನನಗಿದ್ದರೆ ತಪ್ಪೇನು?: ಹಳ್ಳಿಹಕ್ಕಿ ಆಕ್ರೋಶ - vishwanath outrage against yeddyurappa

H vishwanatah outrage against CM yeddyurappa
ಹುಬ್ಬಳ್ಳಿಯಲ್ಲಿ ಸಿಎಂ ಬಿಎಸ್​ವೈ ವಿರುದ್ಧ ಹೆಚ್​. ವಿಶ್ವನಾಥ್​ ಮಾಧ್ಯಮಗೋಷ್ಠಿ

By

Published : Jan 15, 2021, 10:03 AM IST

Updated : Jan 15, 2021, 12:15 PM IST

12:04 January 15

ಹೆಚ್​. ವಿಶ್ವನಾಥ್​ ಮಾಧ್ಯಮಗೋಷ್ಠಿ

ಹುಬ್ಬಳ್ಳಿ:ಸಂಪುಟದಲ್ಲಿ ಸ್ಥಾನ ಸಿಗದೇ ಇದ್ದಿದ್ದಕ್ಕೆ ವಿಧಾನ ಪರಿಷತ್​ ಸದಸ್ಯ ಹೆಚ್​. ವಿಶ್ವನಾಥ್​ ಸಿಡಿಮಿಡಿಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ವಿಶ್ವನಾಥ್​, ಸಿಎಂ ಬಿ.ಎಸ್. ಯಡಿಯೂರಪ್ಪ, ಯೋಗೇಶ್ವರ್​​ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತಿಗೂ ಯಡಿಯೂರಪ್ಪನವರ ಬಗ್ಗೆ ನನಗೆ ಕಳಕಳಿ ಇದೆ. ಅವರ ಬಗ್ಗೆ ನನಗೆ ಗೌರವ ಇತ್ತು. ಆದರೆ ಈಗ ಯಡಿಯೂರಪ್ಪ ನಾಲಿಗೆ ಕಳೆದುಕೊಂಡ ನಾಯಕ, ಮಾತು ತಪ್ಪಿದ ನಾಯಕ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅಮಿತ್​ ಶಾ ಭೇಟಿ ಮಾಡುತ್ತೇನೆ:

ಜನವರಿ 17ರಂದು ಅಮಿತ್​ ಶಾ ಅವರ ಭೇಟಿಗೆ ಕಾಲಾವಕಾಶ ಕೇಳಿದ್ದೇನೆ. ಈ ವೇಳೆ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಅವರ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.

ಅಧಿಕಾರ ವ್ಯಾಮೋಹ ಇರಬಾರದಾ?

ನನಗಿಂತ ಹಿರಿಯರಾದ ಯಡಿಯೂರಪ್ಪ ಅವರಿಗೆ ಅಧಿಕಾರದ ವ್ಯಾಮೋಹ ಇರಬೇಕಾದ್ರೆ, ನನಗೆ ಅಧಿಕಾರದ ವ್ಯಾಮೋಹ ಇದ್ದರೆ ತಪ್ಪೇನು ಎಂದು ಪ್ರಶ್ನಿಸಿದರು. ನಾನು ಪಕ್ಷಾಂತರಿ ಅಲ್ಲ. ನಾಯಕತ್ವದ ವಿರುದ್ಧ ಧ್ವನಿ ಎತ್ತಿ ಪಕ್ಷ ಬದಲಿಸಿದ್ದೇನೆ ಅಷ್ಟೇ ಎಂದು ಹೇಳಿದರು.

ನಾನು ಈ ಎಲ್ಲ ವಿಚಾರಗಳನ್ನು ಪುಸ್ತಕ ರೂಪದಲ್ಲಿ ಹೊರತರುವ ಯೋಚನೆಯಲ್ಲಿದ್ದೇನೆ. ಬಾಂಬೆ-ಡೇಸ್ ಪುಸ್ತಕದಲ್ಲಿ ಸರ್ಕಾರ ರಚನೆಯ ಪ್ರಹಸನದ ಬಗ್ಗೆ ಬರೆಯುತ್ತಿದ್ದೇನೆ ಎಂದರು.

ನಾನು ಯಡಿಯೂರಪ್ಪ ನಾಯಕತ್ವದ ಬಗ್ಗೆ ಮಾತನಾಡುತ್ತಿಲ್ಲ. ಅವರ ನಡವಳಿಕೆ ಬಗ್ಗೆ ಪ್ರಶ್ನೆ ಎತ್ತಿದ್ದೇನೆ. ಯಾರು ಮಾತನಾಡುತ್ತಾರೆ ಅವರನ್ನು ವಿಲನ್ ಮಾಡುತ್ತಾರೆ ಎಂದು ಗುಡುಗಿದರು.

ಯೋಗೇಶ್ವರ್​ ವಿರುದ್ಧ ಗರಂ!

ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರಶ್ನೆ ಮಾಡಬಾರದಾ ಎಂದು ಸಿ.ಪಿ ಯೋಗೇಶ್ವರ್​​ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. 9,700 ವೈಯಕ್ತಿಕ ದೂರುಗಳಿವೆ,‌ ಮೆಗಾ ಸಿಟಿ ಹಗರಣ ನಡೆದಿದೆ. ಜನರಿಂದ‌ ಹಣ ಪಡೆದು ವಂಚಿಸಿದ್ದಾರೆ, ಅಂಥವರು ಮಂತ್ರಿಯಾದ್ರೆ ಹೇಗೆ ಎಂದು ಪ್ರಶ್ನಿಸಿದರು. ಹೈಕೋರ್ಟ್​​ನಲ್ಲಿ ತಡೆಯಾಜ್ಞೆ ತೆರವಾದ್ರೆ ಜೈಲಿಗೆ ಹೋಗುತ್ತಾರೆ. ಅಂಥವರನ್ನು ಮಂತ್ರಿ ಮಾಡಬೇಕಾ ಎಂದರು.

09:56 January 15

ಹುಬ್ಬಳ್ಳಿಯಲ್ಲಿ ಸಿಎಂ ಬಿಎಸ್​ವೈ ವಿರುದ್ಧ ಹೆಚ್​. ವಿಶ್ವನಾಥ್​ ಮಾಧ್ಯಮಗೋಷ್ಠಿ

ಹೆಚ್​. ವಿಶ್ವನಾಥ್​ ಮಾಧ್ಯಮಗೋಷ್ಠಿ

ಮೋದಿ ವಿರುದ್ಧ ಗುಡುಗಿದ ವಿಶ್ವನಾಥ್​ :

ಮೋದಿ ಕುಟುಂಬ ರಾಜಕಾರಣ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಕುಟುಂಬ ರಾಜಕಾರಣ ದೇಶವನ್ನು ಕಿತ್ತು ತಿನ್ನುತ್ತಿದೆ. ಯಡಿಯೂರಪ್ಪ ಕುಟುಂಬದ ರಾಜಕಾರಣ ಅತಿಯಾಗಿದೆ. ಅವರ ಮಗ ವಿಜಯೇಂದ್ರ, ರಾಘವೇಂದ್ರ ಇಬ್ಬರು ರಾಜಕೀಯದಲ್ಲಿದ್ದಾರೆ. ಸಿಎಂ ಕುಟುಂಬದ ಹೆಣ್ಣುಮಕ್ಕಳು ರಾಜಕಾರಣದಲ್ಲಿ ಭಾಗಿಯಾಗುತ್ತಿಲ್ವಾ ಎಂದು ಪ್ರಶ್ನಿಸಿದ ಅವರು ಇದಕ್ಕೆ ಈಶ್ವರಪ್ಪನವರು ಹೊರತಾಗಿಲ್ಲ ಎಂದರು.

ಯಡಿಯೂರಪ್ಪ ಕಾಮಧೇನು:

ಯಡಿಯೂರಪ್ಪ ಕಾಮಧೇನು ಇದ್ದಂತೆ, 30 ವರ್ಷದಿಂದ  ನೋಡುತ್ತಿದ್ದೇನೆ. ಅವರ ಜೀವ ವಿಜಯೇಂದ್ರನ ಕೈಯಲ್ಲಿದೆ. ಬಾಲ ನಾಗಮ್ಮನ ಕಥೆಯಂತಾಗಿದೆ ಯಡಿಯೂರಪ್ಪ ಬದುಕು. ಇವತ್ತಿಗೂ ಯಡಿಯೂರಪ್ಪನವರ ಬಗ್ಗೆ ನನಗೆ ಕಳಕಳಿ ಇದೆ. ನಾಲಿಗೆ ಕಳೆದುಕೊಂಡ ನಾಯಕ, ಮಾತು ತಪ್ಪಿದ ನಾಯಕನಾಗಿದ್ದಾನೆ ಎಂದು ಕಿಡಿಕಾರಿದರು.

ಕೇವಲ ತತ್ವದ ಸಿದ್ಧಾಂತಕ್ಕಾಗಿ ರಾಜಕೀಯ ಮಾಡಲು ಸಾದ್ಯವಿಲ್ಲ. ಅಧಿಕಾರದ ಆಸೆ ಇಲ್ಲ ಅಂತ ನಾನು ಹೇಳುತ್ತಿಲ್ಲ. ರಾಜಕೀಯದಲ್ಲಿ ಅಧಿಕಾರ ಇಲ್ಲದೆ ಏನೂ ಮಾಡಲು ಸಾಧ್ಯವಿಲ್ಲ ಎಂದರು.

ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿಗಾಗಿ ಕಾಗಿನೆಲೆಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಿದ್ದರಾಮಯ್ಯ ಮೀಸಲಾತಿ ಹೋರಾಟ ಬೇಡ ಅಂತಿದ್ದಾರೆ. ವೀರಶೈವ ಲಿಂಗಾಯತ ಮುಖ್ಯಮಂತ್ರಿಗಳು ಇದ್ಯಾಗೂ 2ಎ ಸೇರಿಸುವಂತೆ ಹೋರಾಟ ನಡೆಸಿದ್ದಾರೆ. ಮೀಸಲಾತಿ ಪಡೆಯಲು ಹೋರಾಟ ನಡೆಸಲೆಬೇಕು. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಯಾಕೆ ಮೀಸಲಾತಿ ಬಗ್ಗೆ ಯೋಚಿಸಲ್ಲ. ಈಶ್ವರಪ್ಪ ಬೆಳೆದುಬಿಡುತ್ತಾರೆ ಎಂಬ ಆತಂಕದಿಂದ ವಿರೋಧಿಸುತ್ತಿದ್ದಾರೆ. ಸಿದ್ದರಾಮಯ್ಯ ಏಕಚಕ್ರಾಧಿಪತಿ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

Last Updated : Jan 15, 2021, 12:15 PM IST

ABOUT THE AUTHOR

...view details