ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿ ಹಮಾಲಿ ಕಾರ್ಮಿಕರ ಪ್ರತಿಭಟನೆ - ಹುಬ್ಬಳ್ಳಿ ಪ್ರಭಟನೆ ಸುದ್ದಿ

ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ಜಾರಿ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಜಾರಿ ಸೇರಿ ಅನೇಕ ಬೇಡಿಕೆ ಈಡೇರಿಸುವಂತೆ ಹಮಾಲಿ ಕಾರ್ಮಿಕರು ಒತ್ತಾಯಿಸಿದರು..

Hamali workers protest
ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಹಮಾಲಿ ಕಾರ್ಮಿಕರ ಪ್ರತಿಭಟನೆ..

By

Published : Sep 23, 2020, 3:09 PM IST

ಹುಬ್ಬಳ್ಳಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಮಾಲಿ ಕಾರ್ಮಿಕರು ಅಮರಗೋಳದ ಎಪಿಎಂಸಿ ಆಡಳಿತ ಕಚೇರಿ ಎದುರು ಸಾಮೂಹಿಕ ಪ್ರತಿಭಟನೆ ನಡೆಸಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಮಾಲಿ ಕಾರ್ಮಿಕರ ಪ್ರತಿಭಟನೆ..

ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಮೂಲಕ 1 ಲಕ್ಷ ಹಮಾಲಿ‌ ಕಾರ್ಮಿಕರ ಉದ್ಯೋಗ ಕಸಿದುಕೊಳ್ಳಲು ಹೊರಟಿದೆ. ಕೂಡಲೇ ಕಾಯ್ದೆ ವಾಪಸ್ ಪಡೆಯಬೇಕು. ಕಾರ್ಮಿಕರಿಗೆ ಕೋವಿಡ್-19 ಪರಿಹಾರ‌ ಮತ್ತು ರೇಷನ್ ಕಿಟ್ ವಿತರಣೆ ಮಾಡಬೇಕು.

ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ಜಾರಿ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಜಾರಿ ಸೇರಿ ಅನೇಕ ಬೇಡಿಕೆ ಈಡೇರಿಸುವಂತೆ ಹಮಾಲಿ ಕಾರ್ಮಿಕರು ಒತ್ತಾಯಿಸಿದರು. ಧರಣಿಯಲ್ಲಿ ಸಿಐಟಿಯುನ ಅಧ್ಯಕ್ಷ ಕೆ.ಮಹಾಂತೇಶ್, ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ್, ಮುಖಂಡರಾದ ಡಾ.ಗಣೇಶ ದೇವಿ ಸೇರಿ ನೂರಾರು ಹಮಾಲಿ‌ ಕಾರ್ಮಿಕರು ಭಾಗಿಯಾಗಿದ್ದರು.

ABOUT THE AUTHOR

...view details