ಕರ್ನಾಟಕ

karnataka

ETV Bharat / state

ಯೋಗೀಶ್​​ ಗೌಡ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಿದ್ದು ಖುಷಿಯ ವಿಚಾರ: ಕೇಂದ್ರ ಸಚಿವ ಜೋಶಿ

ಯೋಗೀಶ್ ಗೌಡ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಿದ್ದು ಖುಷಿಯ ವಿಚಾರ ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಹೇಳಿದ್ದಾರೆ.

ಯೋಗೀಶ್ ಗೌಡ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಿದ್ದು ಖುಷಿಯ ವಿಚಾರ

By

Published : Sep 7, 2019, 8:46 PM IST

ಹುಬ್ಬಳ್ಳಿ:2016ರಲ್ಲಿ ನಡೆದ ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬ ಸಿಬಿಐ ತನಿಖೆಗೆ ಆಗ್ರಹಿಸಿತ್ತು. ಈ ಹಿನ್ನೆಲೆ ರಾಜ್ಯದ ಮುಖ್ಯಮಂತ್ರಿ ಸಿಬಿಐಗೆ ತನಿಖೆಗೆ ವಹಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ವಿಶೇಷ ಸಭೆಗೆ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿ ಹಾಗೂ ನಿಷ್ಪಕ್ಷಪಾತ ತನಿಖೆಗೆ ಹಿಂದಿನ ಸರ್ಕಾರಕ್ಕೆ ಒತ್ತಾಯ ಮಾಡಿದ್ದರು. ಆದ್ರೆ ಇದೀಗ ಅವರೇ ರಾಜ್ಯದ ಮುಖ್ಯಮಂತ್ರಿಗಳಾಗಿರುವುದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ ಎಂದ್ರು.

ಯೋಗೀಶ್ ಗೌಡ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಿದ್ದು ಖುಷಿಯ ವಿಚಾರ: ಪ್ರಹ್ಲಾದ್​ ಜೋಶಿ

ಇನ್ನು ಯೋಗೀಶ್ ಗೌಡ ಕುಟುಂಬ ಸಿಬಿಐ ತನಿಖೆಗೆ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ನೀಡಿದೆ. ಮುಖ್ಯಮಂತ್ರಿಗಳ‌‌ ಕೆಲಸ ಸಂತೋಷ ತಂದಿದೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆಂದ್ರು.

ABOUT THE AUTHOR

...view details